ಕುಶಾಲನಗರ ಜ.20 : ಕುಶಾಲನಗರ ಶ್ರೀ ಚೌಡೇಶ್ವರಿ ದೇವಾಲಯದ 35ನೇ ವಾರ್ಷಿಕೋತ್ಸವ ಮತ್ತು ದೇವಿಯ ಪ್ರತಿಮೆ ಅನಾವರಣ ಕಾರ್ಯಕ್ರಮ ಜ.25 ರಿಂದ 3 ದಿನಗಳ ಕಾಲ ನಡೆಯಲಿದೆ ಎಂದು ದೇವಾಂಗ ಸಂಘದ ಅಧ್ಯಕ್ಷರಾದ ಡಿ.ಟಿ.ವಿಜಯೇಂದ್ರ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕುಶಾಲನಗರ ರಥಬೀದಿಯಲ್ಲಿರುವ ದೇವಾಲಯದ ಮೇಲಂತಸ್ತಿನ ಗೋಪುರ ಉದ್ಘಾಟನೆ ಜ.26 ರಂದು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ತಿಳಿಸಿದರು.
ಅಂದು ಸಂಜೆ ವಿದ್ಯುತ್ ದೀಪಾಲಂಕಾರದೊಂದಿಗೆ ಕುಶಾಲನಗರದ ಮುಖ್ಯ ರಸ್ತೆಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದ ದೇವಾಂಗ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿ.ರಾಜೇಶ್, 3 ದಿನಗಳ ಕಾಲ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮದೊಂದಿಗೆ ದಿನಾಂಕ 26 ರಂದು ಸಭಾ ಕಾರ್ಯಕ್ರಮ ನಡೆಯಲಿದೆ. ದೇವಾಂಗ ಪೀಠಾಧಿಪತಿಗಳಾದ ಶ್ರೀ ದಯಾನಂದಪುರಿ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಂಗ ಸಂಘದ ಅಧ್ಯಕ್ಷರಾದ ಡಿ.ಟಿ.ವಿಜಯೇಂದ್ರ ವಹಿಸುವರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನೆರವೇರಿಸಲಿದ್ದು, ಮುಖ್ಯ ಭಾಷಣಕಾರರಾಗಿ ಮಾಜಿ ಶಾಸಕರಾದ ಎಂ.ಬಿ ಲಕ್ಷ್ಮೀ ನಾರಾಯಣ ಪಾಲ್ಗೊಳ್ಳುವರು. ದೇವಾಂಗ ಸಂಘದ ರಾಜ್ಯಾಧ್ಯಕ್ಷರಾದ ರವೀಂದ್ರ ಪಿ. ಕಲಬುರ್ಗಿ ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿರುವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳಿಗೆ ಸನ್ಮಾನ, ಸಂಘ ಅಭಿವೃದ್ದಿಗೆ ಶ್ರಮಿಸಿದ ಗಣ್ಯರಿಗೆ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಗೋಷ್ಟಿಯಲ್ಲಿ ಉಪಾಧ್ಯಕ್ಷರಾದ ಡಿ.ಆರ್.ಸೋಮಶೇಖರ್, ಸಹ ಕಾರ್ಯದರ್ಶಿ ಟಿ.ವಿಚಂದ್ರು, ಖಜಾಂಚಿ ಡಿ.ಆರ್.ಕೃಷ್ಣಕುಮಾರ್, ಕೆ.ಕೆ.ನಾಗರಾಜಶೆಟ್ಟಿ, ರಾಜೇಶ್ ಇದ್ದರು.















