ವಿರಾಜಪೇಟೆ:ಜ.20 : ಕಂಡಂಗಾಲ ಗ್ರಾಮದ ನಿವಾಸಿ ವಿರಾಜಪೇಟೆಯ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಹಾಲಿ ಕಾರ್ಯದರ್ಶಿಯಾಗಿದ್ದ ಮೂಕಚಂಡ ಅರುಣ್ ಅಪ್ಪಣ್ಣ ಅವರ ನಿಧನಕ್ಕೆ ವಿರಾಜಪೇಟೆ ಕರ್ನಾಟಕ ಸಂಘದ ಸಭಾಂಗಣದಲ್ಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷ ಮಾಳೇಟಿರ ಎಂ.ಬೆಲ್ಲು ಬೊಪಯ್ಯ ಮಾತನಾಡಿ ಅಪ್ಪಣ್ಣ ಅವರು ಅನೇಕ ವರ್ಷಗಳಿಂದಲೂ ಕರ್ನಾಟಕ ಸಂಘದಲ್ಲಿ ಕನ್ನಡ ಭಾಷೆ ನಾಡು ನುಡಿಯನ್ನು ಉಳಿಸಿ ಬೆಳೆಸುವಂತ ಕಾರ್ಯಕ್ರಮಗಳನ್ನು ನಡೆಸಲು ಸಹಕಾರ ನೀಡಿದಂತ ಉತ್ತಮ ವ್ಯಕ್ತಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದರು.
ಸಂತಾಪ ಸಭೆಯಲ್ಲಿ ಕರ್ನಾಟಕ ಸಂಘದ ಉಪಾಧ್ಯಕ್ಷರು, ಸಹ ಕಾರ್ಯದರ್ಶಿ, ಕೋಶಾದಿಕಾರಿ ಸೇರಿದಂತೆ ಆಡಳಿತ ಮಂಡಳಿಯ ಎಲ್ಲಾ ನಿರ್ಧೇಶಕರುಗಳು ಉಪಸ್ಥಿತರಿದ್ದರು.