Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮರು ವ್ಯಾಖ್ಯಾನಿಸಿದ ಮಾನದಂಡದಡಿ ಕೊಡವರನ್ನು ಎಸ್ಟಿ ಪಟ್ಟಿಗೆ ಸೇರಿಸಲು ಒತ್ತಾಯ
ಇತ್ತೀಚಿನ ಸುದ್ದಿಗಳು

ಮರು ವ್ಯಾಖ್ಯಾನಿಸಿದ ಮಾನದಂಡದಡಿ ಕೊಡವರನ್ನು ಎಸ್ಟಿ ಪಟ್ಟಿಗೆ ಸೇರಿಸಲು ಒತ್ತಾಯ

January 20, 20232 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.20 : ಕೇಂದ್ರ ಸರ್ಕಾರದ ಅಧೀನದ ಕೇಂದ್ರ ಬುಡಕಟ್ಟು ಸಚಿವಾಲಯವು 2017 ರಲ್ಲಿ ರೂಪಿಸಿದ “ಹೊಸ ಮರು ವ್ಯಾಖ್ಯಾನಿಸಿದ ಮಾನದಂಡ” ದಡಿಯಲ್ಲಿ ಕೊಡವ ಜನಾಂಗವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಭದ್ರತೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಕುರಿತು ಕೇಂದ್ರ ಬುಡಕಟ್ಟು ಮಂತ್ರಾಲಯ, ರಾಷ್ಟ್ರೀಯ ಬುಡಕಟ್ಟು ಆಯೋಗ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಪ್ರಧಾನ ಕಾರ್ಯದರ್ಶಿ, ಬುಡಕಟ್ಟು ಕಲ್ಯಾಣ ಮಂತ್ರಾಲಯದ ಕಾರ್ಯದರ್ಶಿ, ನಿರ್ದೇಶಕರು ಹಾಗೂ ಬುಡಕಟ್ಟು ಶಂಶೋಧನ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಕೊಡಗಿನ ಮೂಲ ಬುಡಕಟ್ಟು ಜನಾಂಗವಾಗಿರುವ ಕೊಡವರನ್ನು ಎಸ್ಟಿ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದು ತ್ವರಿತವಾಗಿ ಆಗದಿದ್ದರೆ ಕೊಡವ ಬುಡಕಟ್ಟು ಜನಾಂಗದ ಭವಿಷ್ಯವು ಕತ್ತಲೆಯಲ್ಲಿ ಮುಳುಗುತ್ತದೆ. ಕೊಡವರ ಜಾನಪದ ಗುರುತು ಮತ್ತು ಭೌಗೋಳಿಕ-ರಾಜಕೀಯ ಅಸ್ತಿತ್ವಕ್ಕೆ ಹಾನಿಯಾಗಲಿದೆ. ಭಾರತ ದೇಶವು ಬಹು ಜನಾಂಗೀಯ ಹೂದೋಟದಂತ್ತಿದ್ದು, ಇತರ ಜನಾಂಗೀಯ ಗುಂಪುಗಳಿಗೆ ನೀಡಲಾಗುವ ಅದೇ ಸಾಂವಿಧಾನಿಕ ಪೋಷಣೆಯನ್ನು ಕೊಡವ ಬುಡಕಟ್ಟು ಜನಾಂಗಕ್ಕೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ಪಹಾರಿ ಸಮುದಾಯ, ಪೆರಂಬಲೂರಿನ ನರಿಕೊರವನ್/ನರಿಕುರವರ್, ಊಟಿಯ ಬಡಗಾಸ್, ಅಸ್ಸಾಂನ ಕೋಚ್ ರಾಜ್ಬೊಂಗ್ಶಿ, ಮಟಕ್, ಮೋರಾನ್, ಟೀ ಟ್ರೈಬ್, ಚುಟಿಯಾ, ತೈ ಅಹೋಮ್ ಸೇರಿದಂತೆ 6 ಬುಡಕಟ್ಟು ಸಮುದಾಯಗಳನ್ನು ಎಸ್ಟಿ ಪಟ್ಟಿಗೆ ಸೇರಿಸಲು ಉತ್ಸುಕವಾಗಿದೆ ಮತ್ತು ಪ್ರಕ್ರಿಯೆ ಆರಂಭಿಸಿದೆ. ಸಾಂವಿಧಾನಿಕವಾಗಿ ಹಕ್ಕನ್ನು ಪಡೆಯಲು ಬಾಕಿ ಉಳಿದಿರುವ ಕೊಡವ ಜನಾಂಗದ ಬಗ್ಗೆಯೂ ಕೇಂದ್ರ ಸರ್ಕಾರ ಅದೇ ಕ್ರಮ ಅನುಸರಿಸಬೇಕು ಎಂದು ಹೇಳಿದ್ದಾರೆ.
1956 ರಲ್ಲಿ ಕೂರ್ಗ್ ಅನ್ನು ವಿಶಾಲ ಮೈಸೂರಿನಲ್ಲಿ ವಿಲೀನಗೊಳಿಸಿದ ನಂತರ, ಇಂದಿನ ಕರ್ನಾಟಕ ರಾಜ್ಯವು ಕೊಡವ ಜನಾಂಗದ ಎಲ್ಲಾ ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ಹುಸಿ ಮಾಡಿತು ಎಂದು ಆರೋಪಿಸಿದ್ದಾರೆ.
ಕೊಡವ ಜನಾಂಗದೊಳಗೆ ಯಾವುದೇ ಉಪಪಂಗಡವಿಲ್ಲ, ನಾವು ಕೂರ್ಗ್‍ಗೆ ಮಾತ್ರ ಸೀಮಿತವಾಗಿದ್ದೇವೆ, ನಮ್ಮ ಜನಸಂಖ್ಯೆ ಕೂಡ ಕಡಿಮೆ ಇದೆ. ಆದ್ದರಿಂದ ಸೂಕ್ಷ್ಮ ಕೊಡವ ಜನಾಂಗವನ್ನು ರಕ್ಷಿಸಲು ಮತ್ತು ಅಧಿಕಾರ ನೀಡಲು ಸಂವಿಧಾನದಲ್ಲಿ ಉಳಿದಿರುವ ಏಕೈಕ ಆಯ್ಕೆಯೆಂದರೆ ಅವರನ್ನು ಎಸ್‍ಟಿ ಪಟ್ಟಿಗೆ ಸೇರಿಸುವುದು ಎಂದು ನಾಚಪ್ಪ ಅಭಿಪ್ರಾಯಪಟ್ಟಿದ್ದಾರೆ.
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ/ಸ್ವಯಂ-ಆಡಳಿತವನ್ನು ಸಾಧಿಸಲು ಮತ್ತು ಕೊಡವರನ್ನು ಎಸ್‍ಟಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಶಾಂತಿಯುತವಾಗಿ ಹೋರಾಟಗಳನ್ನು ನಡೆಸುತ್ತಾ ಬಂದಿದೆ.
ಸಿಎನ್‍ಸಿಯ ಮನವಿಗೆ ಪ್ರತಿಯಾಗಿ 2011 ರಲ್ಲಿ ಸರ್ಕಾರ ಕೊಡವರ ಎಥ್ನೋಗ್ರಾಫಿಕ್ ಅಧ್ಯಯನಕ್ಕೆ ಆದೇಶ ನೀಡಿತು. ಆದರೆ ಮೈಸೂರಿನಲ್ಲಿರುವ ಪೂರ್ವಾಗ್ರಹ ಮನೋಭಾವದ ಜನರು ಇಡೀ ಅಧ್ಯಯನ ಪ್ರಕ್ರಿಯೆಯನ್ನು ಅಪಾಯಕ್ಕೆ ಸಿಲುಕಿಸಿದರು. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಇಡೀ ಪ್ರಕ್ರಿಯೆಯನ್ನು ಬುಡಮೇಲು ಮಾಡಿದರು. ಇದರ ವಿರುದ್ಧ ನಾವು ಕಾನೂನು ಮೊರೆ ಹೋದಾಗ ಉಚ್ಚ ನ್ಯಾಯಾಲಯವು 21 ಜುಲೈ 2021 ರಂದು ಜನಾಂಗೀಯ ಅಧ್ಯಯನವನ್ನು ಸರಿಪಡಿಸಲು ಅಥವಾ ಅದರ ಮರು-ಅಧ್ಯಯನಕ್ಕಾಗಿ ತೀರ್ಪು ನೀಡಿತು.
ಹೈಕೋರ್ಟ್ ಆದೇಶದ ಅನುಷ್ಠಾನಕ್ಕಾಗಿ ಬುಡಕಟ್ಟು ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು 25 ಏಪ್ರಿಲ್ 2022 ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ನಮ್ಮೊಂದಿಗೆ ಸಭೆಯನ್ನು ನಡೆಸಿ ಅಭಿಪ್ರಾಯವನ್ನು ಸಂಗ್ರಹಿಸಿದರು. ಮರು ಅಧ್ಯಯನಕ್ಕೆ ಶಿಫಾರಸ್ಸು ಮಾಡಿದರು ಮತ್ತು ಕಡತವನ್ನು ಬುಡಕಟ್ಟು ಕಲ್ಯಾಣ ಇಲಾಖೆಗೆ ರವಾನಿಸಿದರು. 17 ಆಗಸ್ಟ್ 2022 ರಂದು ಕರ್ನಾಟಕ ಸರ್ಕಾರದ ಬುಡಕಟ್ಟು ಕಲ್ಯಾಣ ಸಚಿವರನ್ನು ಭೇಟಿ ಮಾಡಿದಾಗ ನಮ್ಮ ಬೇಡಿಕೆಗೆ ಒಪ್ಪಿಗೆ ನೀಡಿದರು ಮತ್ತು ಅದರ ಕ್ಲಿಯರೆನ್ಸ್‍ಗಾಗಿ ಕಡತವನ್ನು ಕರ್ನಾಟಕದ ಸಿಎಂಗೆ ರವಾನಿಸಿದರು. ಆದರೆ ನಂತರದ ದಿನಗಳಲ್ಲಿ ನಮ್ಮ ಕಡತವನ್ನು ನಿರ್ಲಕ್ಷಿಸಲಾಗಿದೆ, ಇದು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ನಾಚಪ್ಪ ಟೀಕಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಸುಂಟಿಕೊಪ್ಪದಲ್ಲಿ 80 ಕೆಜಿ ಗೋಮಾಂಸ ಪತ್ತೆ
Next Article ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ : ಭರ್ಜರಿ ಸಿದ್ಧತೆ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.