ಮಡಿಕೇರಿ ಜ.20 : ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ಹಾಗೂ ವಿರಾಜಪೇಟೆ ತಾಲ್ಲೂಕು ಸಮಿತಿ ವತಿಯಿಂದ ಕೆದಮುಳ್ಳೂರು ಗ್ರಾಮದ ಬಾರಿಕಾಡು ಪೈಸಾರಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳ ಕುರಿತು ಅರಿವು ಕಾರ್ಯಕ್ರಮ ನಡೆಯಿತು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಗಾಥೆ ಹಾಗೂ ತತ್ವ ಸಿದ್ಧಾಂತಗಳ ಬಗ್ಗೆ ಸಮಿತಿಯ ಜಿಲ್ಲಾಧ್ಯಕ್ಷರಾದ ಗಾಯತ್ರಿ ನರಸಿಂಹ ವಿವರಿಸಿದರು. ಸಂವಿಧಾನ ಶಿಲ್ಪಿಯ ಆದರ್ಶವನ್ನು ಮೈಗೂಡಿಸಿಕೊಳ್ಳುವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲರಾಗುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ಸ್ಥಳೀಯ ಸುಮಾರು 45 ಕುಟುಂಬಗಳಿಗೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿತರಿಸಲಾಯಿತು.
ಇದೇ ಸಂದರ್ಭ ದಲಿತ ಸಂಘರ್ಷ ಸಮಿತಿಗೆ ಪ್ರಾಥಮಿಕ ಸದಸ್ಯತ್ವ ನೋಂದಣಿ ಮಾಡಲಾಯಿತು.
ತಾಲ್ಲೂಕು ಅಧ್ಯಕ್ಷ ಮನು, ದಲಿತ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ರೇಖಾ ಮಹೇಶ್, ಪ್ರಮುಖರಾದ ರಘು, ಬೋಜ, ಕುಳಿಯ, ಮಂಜುಳಾ, ದಿವ್ಯ ಮತ್ತಿತರರು ಉಪಸ್ಥಿತರಿದ್ದರು.