ಮಡಿಕೇರಿ ಜ.20 : ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ತೋಟವನ್ನಾಗಿ ಪರಿವರ್ತಿಸಿರುವ ಪ್ರಕರಣಗಳಲ್ಲಿ, ಗುತ್ತಿಗೆ ಆಧಾರದಲ್ಲಿ 30 ವರ್ಷಗಳ ಅವಧಿಗೆ ಜಾಗ ನೀಡುವ ಕುರಿತು ಸರ್ಕಾರ ಹೊರಡಿಸಿರುವ ಆದೇಶದಂತೆ ಕ್ರಮ ಕೈಗೊಳ್ಳಬೇಕೆ ಹೊರತು ಬಡಕೃಷಿಕರನ್ನು ತೆರವುಗೊಳಿಸಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಶಾಖೆಯ ಸಂಚಾಲಕ ಗರಗಂದೂರು ಲಕ್ಷ್ಮಣ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಣ್ಣ ಬೆಳೆಗಾರರು ಅತಿಕ್ರಮಿಸಿ ತೋಟವನ್ನಾಗಿ ಪರಿವರ್ತಿಸಿರುವ ಸರ್ಕಾರಿ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಒತ್ತುವರಿ ಜಾಗದ ಕೃಷಿಯನ್ನು ನಾಶ ಪಡಿಸುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಫಿ ತೋಟಗಳಲ್ಲಿ ಸಾಕಷ್ಟು ಮರಗಿಡಗಳನ್ನು ಬೆಳೆಸುವುದರಿಂದ ಅದು ಪರಿಸರ ಸಂರಕ್ಷಣೆಗೂ ಪೂರಕವಾಗಿದೆ. ಸರ್ಕಾರಿ ಪೈಸಾರಿ ಜಾಗದಲ್ಲಿರುವ ಕಾಫಿ ತೋಟಗಳನ್ನು ತೆರವುಗೊಳಿಸುವ ಭಾಗವಾಗಿ ಅಲ್ಲಿನ ಗಿಡಗಳನ್ನು ಕಡಿದು ಹಾಕುವುದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಷ್ಟ್ರಕ್ಕೆ ದೊಡ್ಡ ಮಟ್ಟದ ವಿದೇಶಿ ವಿನಿಮಯ ಗಳಿಸಿಕೊಡುವ ಕಾಫಿ ಉತ್ಪಾದನೆಯ ಮೇಲೂ ಇದು ಕೆಟ್ಟ ಪರಿಣಾಮ ಉಂಟು ಮಾಡಲಿದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆಯ ವಿವಿಧೆಡೆ ತೋಟಗಳಾಗಿ ಪರಿವರ್ತಿತವಾಗಿರುವ ಸರ್ಕಾರಿ ಜಮೀನನ್ನು ಕಂದಾಯ, ಅರಣ್ಯ ಇಲಾಖೆ ಹಾಗೂ ಕೆಲವೆಡೆಗಳಲ್ಲಿ ಗ್ರಾಮಸ್ಥರೆ ರಾಜಕೀಯ ಕಾರಣಗಳ ಹಿನ್ನೆಲೆ ತೆರವುಗೊಳಿಸುವ ಮೂಲಕ ಬಡಕೃಷಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಫಿ ಗಿಡಗಳನ್ನು ಕಡಿದು ಒತ್ತುವರಿ ತೆರವುಗೊಳಿಸಿ ಕೃಷಿಕರ ಬದುಕನ್ನು ಸಂಕಷ್ಟಕ್ಕೆ ತಳ್ಳಿರುವ ಕೆಲವು ಪ್ರಕರಣಗಳ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆಯಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರೈತ ಸಂಘದಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸೋಮವಾರಪೇಟೆ ತಾಲ್ಲೂಕಿನ ಹರಗ ಗ್ರಾಮ, ಹಾನಗಲ್ಲು ಶೆಟ್ಟಳ್ಳಿ, ಭಾಗಮಂಡಲ ಮತ್ತಿತರ ಗ್ರಾಮಗಳಲ್ಲಿ ಸಣ್ಣ ಕೃಷಿಕರಿಗೆ ಅನ್ಯಾಯವಾಗಿದೆ ಎಂದು ಲಕ್ಷ್ಮಣ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಸದಸ್ಯ ನಾಪಂಡ ಸುಬ್ಬಯ್ಯ ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*