ಮಡಿಕೇರಿ ಜ.20 : ತಂದೆ ತಾಯಿಯರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕ್ರೆ ಆಸ್ತಿಯನ್ನು ಹೊಂದಿದ್ದರು.
ಅವರಿಂದ ಅವರ ಎರಡನೇ ಮಗಳಾದ ಜಯಲಕ್ಷಿ ಬಿ.ಎಸ್ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆಯನ್ನು ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಪೋಷಕರ ಯೋಗಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದರು. ಇದರಿಂದ ನೊಂದ ಪೋಷಕರು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಿ ದಾನಪತ್ರ ರದ್ದುಗೊಳಿಸಿ ಆಸ್ತಿಯನ್ನು ವಾಪಸ್ಸು ಕೊಡಿಸುವಂತೆ ಮನವಿ ಮಾಡಿದ್ದರು.
ಆ ನಿಟ್ಟಿನಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಅರ್ಜಿಯನ್ನು ಉಪ ವಿಭಾಗಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ ಅಡಿ ದಾನಪತ್ರ ರದ್ದುಗೊಳಿಸಿ ಅಸ್ತಿಯನ್ನು ಬಿ.ಎಸ್.ಜಾನಕಿ ಅವರ ಹೆಸರಿಗೆ ವರ್ಗಾಯಿಸುವಂತೆ ಆದೇಶ ನೀಡಿರುತ್ತಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*