ಸೋಮವಾರಪೇಟೆ,ಜ.20 : ಭಾರತೀಯ ಜನತಾ ಪಾರ್ಟಿಯ 6 ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ಹಾಗೂ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯು ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆಯಿತು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಸದ್ಯದಲ್ಲಿಯೇ ರಾಜ್ಯ ವಿಧಾನ ಸಭಾ ಚುನಾವಣೆ ಎದುರಾಗಲಿದ್ದು, ಯಾರೇ ಅಭ್ಯರ್ಥಿಯಾದರೂ ಬಿಜೆಪಿಯ ಗೆಲುವಿಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು.
ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕಾರ್ಯ ಆಗಬೇಕು. ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ ಎಂದರು.
ಜಿ.ಪಂ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶವು ಬಲಿಷ್ಠವಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನೇಕ ಜನಪರ ಕಾರ್ಯಕ್ರಮಗಳು ಜನರ ಮನ ಗೆದ್ದಿವೆ. ಬಿಜೆಪಿಯು ಬೂತ್ ಮಟ್ಟದಲ್ಲಿ ಬಲಿಷ್ಠವಾಗಿದೆ ಎಂದರು.
ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಪಕ್ಷದ ಮುಖಂಡರಾದ ಹೆಚ್.ಕೆ. ಮಾದಪ್ಪ, ಮಹೇಶ್ ತಿಮ್ಮಯ್ಯ, ಎಸ್.ಆರ್. ಸೋಮೇಶ್, ಅಭಿಮನ್ಯುಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರ ಹಾಗೂ ಉದ್ಯಮಿ ತಾಕೇರಿ ವಿಶ್ವನಾಥ್ ಮುತ್ತಣ್ಣ ಬಿಜೆಪಿ ಸೇರ್ಪಡೆಗೊಂಡರು.