ಸೋಮವಾರಪೇಟೆ ಜ.21 : ಸೋಮವಾರಪೇಟೆ ಪುಷ್ಪಗಿರಿ ಜೂನಿಯರ್ ಜೇಸಿ ವಿಭಾಗದಿಂದ ನೇರುಗಳಲೆ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಜೂನಿಯರ್ ಜೇಸಿ ಅಧ್ಯಕ್ಷೆ ರಿಶಾ ಮಾತನಾಡಿ, ಜೇಸಿ ಜೂನಿಯರ್ ವಿಭಾಗದಿಂದ ಈ ವರ್ಷ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಗುರಿ ಇದೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದರು.
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಮಂಜುಳ ಅವರು ಮಕ್ಕಳ, ಕಿವಿ, ಮೂಗು, ಗಂಟಲಿನ ಆರೋಗ್ಯ ತಪಾಸಣೆ ಮಾಡಿದರು.
ಜೇಸಿ ಸಂಸ್ಥೆಯ ಅಧ್ಯಕ್ಷೆ ಎಂ.ಎ.ರುಬಿನಾ, ಜೇಸಿ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ, ಎಸ್‍ಡಿಎಂಸಿ ಅಧ್ಯಕ್ಷೆ ಪದ್ಮಾವತಿ, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ಇದ್ದರು.









