ಸೋಮವಾರಪೇಟೆ ಜ.21 : ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಪಾವಿತ್ರತೆ ಕಾಪಾಡಲು ಪ್ಲಾಸ್ಟಿಕ್ ಧ್ವಜ ಬಳಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಆಗ್ರಹಿಸಿದರು.
ಸೋಮವಾರಪೇಟೆ ತಹಶೀಲ್ದಾರ್ ನರಗುಂದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಿತಿ ಸದಸ್ಯರು, ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾವುಟಗಳನ್ನು ಬಳಸಿ, ತ್ಯಾಜ್ಯದ ರಾಶಿ, ಚರಂಡಿ ಸೇರಿದಂತೆ ಎಲ್ಲೆಂದರಲ್ಲಿ ಎಸೆಯುವುದರಿಂದ ಧ್ವಜಕ್ಕೆ ಅಪಮಾನವಾಗುತ್ತಿದೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ತಯಾರಿಸಿ ಮಾರಾಟ ಮಾಡುವುದು ಮತ್ತು ಬಳಸುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಮಿತಿಯ ಸದಸ್ಯರಾದ ಕೆ.ಎನ್. ತೇಜಸ್ವಿ, ರಾಜೇಶ್, ಶಂಕರ್, ಬಿ.ಎಂ. ಪ್ರದೀಪ್, ತಾಕೇರಿ ವೆಂಕಟೇಶ್, ಜಯಪ್ರಕಾಶ್ ಹಾಜರಿದ್ದರು.