Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಂವಿಧಾನದ ಆಶಯ ತಿಳಿದು ಸಾರ್ವಜನಿಕರಿಗೆ ಸ್ಪಂದಿಸಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂವಿಧಾನದ ಆಶಯ ತಿಳಿದು ಸಾರ್ವಜನಿಕರಿಗೆ ಸ್ಪಂದಿಸಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

ಜನವರಿ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.21 : ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.
ಅಹವಾಲು ಸ್ವೀಕಾರಕ್ಕೂ ಮೊದಲು ಮಾತನಾಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭಾರತ ಸಂವಿಧಾನವು ಪ್ರಜೆಗಳಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದ್ದು, ಸಂವಿಧಾನದ ಆಶೋತ್ತರ ಮತ್ತು ಆಶಯಗಳನ್ನು ಅರ್ಥಮಾಡಿಕೊಂಡು ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇದೆ. ರಾಷ್ಟ್ರಕವಿ ಕುವೆಂಪು ಹೇಳಿರುವಂತೆ ‘ಎಲ್ಲರಿಗೂ ಸಮಪಾಲು, ಎಲ್ಲರಿಗೂ ಸಮಬಾಳು’ ಇದೆ. ಆದ್ದರಿಂದ ಸರ್ಕಾರದ ಯೋಜನೆಗಳು ಕಟ್ಟಕಡೆಯ ಜನರಿಗೆ ತಲುಪಬೇಕು. ಎಲ್ಲರೂ ಸರಿಸಮಾನವಾಗಿ ಬದುಕು ನಡೆಸುವಂತಾಗಬೇಕು ಎಂದು ಕೆ.ಎನ್.ಫಣೀಂದ್ರ ನುಡಿದರು.
ಪ್ರತಿಯೊಬ್ಬರೂ ಸಮೃದ್ಧಿಯ ಜೀವನ ನಡೆಸುವಂತಾಗಬೇಕು. ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯ ಪಾಲಿಸುವುದನ್ನು ಮರೆಯಬಾರದು ಎಂದರು.
ಸಂವಿಧಾನದಲ್ಲಿ ಶಾಸಕಾಂಗ ಕಾನೂನು ಜಾರಿ ಮಾಡಿದರೆ, ಕಾರ್ಯಾಂಗ ಅನುಷ್ಠಾನಗೊಳಿಸಲಿದೆ. ನ್ಯಾಯಾಂಗವು ಕಾನೂನನ್ನು ಸಂರಕ್ಷಣೆ ಮಾಡುತ್ತದೆ. ಜೊತೆಗೆ ಮಾಧ್ಯಮ ರಂಗವು ಸಮಾಜಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ವಿವರಿಸಿದರು.
ಸಾರ್ವಜನಿಕವಾಗಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರೂ ಸಮಾಜದಲ್ಲಿ ಉತ್ತರದಾಯಿತ್ವ ಹೊಂದಿರಬೇಕು. ಆ ನಿಟ್ಟಿನಲ್ಲಿ ಕರ್ತವ್ಯ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಸಮಾಜದಲ್ಲಿ ಮಾದರಿಯಾಗಿ ನಡೆದುಕೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಲಮಿತಿಯಲ್ಲಿ ಸೌಲಭ್ಯಗಳನ್ನು ತಲುಪಿಸಬೇಕು ಎಂದರು.
ಸಾರ್ವಜನಿಕರಿಗೆ ತೊಂದರೆಯಾದಲ್ಲಿ/ ಕರ್ತವ್ಯ ಲೋಪ ಎಸಗಿದ್ದಲ್ಲಿ ಲೋಕಾಯುಕ್ತ ಸಂಸ್ಥೆಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ. ಆ ನಿಟ್ಟಿನಲ್ಲಿ ಲೋಕಾಯುಕ್ತವು ವಿಚಾರಣೆ ಮಾಡಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.
ಲೋಕಾಯುಕ್ತ ಸಂಸ್ಥೆಗೆ ವೈಯಕ್ತಿಕ ಹಾಗೂ ಸಾರ್ವಜನಿಕ ಹಕ್ಕುಗಳ ಬಗ್ಗೆ ದೂರು ಸಲ್ಲಿಸಬಹುದಾಗಿದ್ದು, ವೈಯಕ್ತಿಕ ಹಾಗೂ ಸಾರ್ವಜನಿಕ ಹಕ್ಕುಗಳು ಉಲ್ಲಂಘನೆ ಆಗದಂತೆ ಗಮನಹರಿಸಬೇಕು. ಉಲ್ಲಂಘನೆ ಆದಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆಯಬಹುದು. ಹಾಗೆಯೇ ಮೂಲಭೂತ ಹಕ್ಕುಗಳು ಉಲ್ಲಂಘನೆಯಾದಲ್ಲಿ ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಬೇಕಿದೆ ಎಂದರು.
ಪ್ರತಿಯೊಬ್ಬರೂ ಶಿಸ್ತು ಬದ್ಧ ಜೀವನ ನಡೆಸಬೇಕು. ಸಾರ್ವಜನಿಕ ಜೀವನದಲ್ಲಿ ದ್ರೋಹ ಬಗೆಯಬಾರದು. ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕು ಎಂದು ವಿವರಿಸಿದರು.
‘ಸಾರ್ವಜನಿಕರ ಕುಂದುಕೊರತೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ 39 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಆಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಗನ್ನು ಸ್ಥಳದಲ್ಲಿಯೇ ಕರೆಸಿ ವಿಚಾರಣೆ ನಡೆಸಿದರು.’
‘ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿ ಮಾತನಾಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಮಡಿಕೇರಿ ನಗರದಿಂದ ಜಿಲ್ಲಾ ಪಂಚಾಯತ್ ಕಚೇರಿ ಹೊರಭಾಗದಲ್ಲಿ ಇರುವುದರಿಂದ ಪ್ರತೀ ನಿತ್ಯ ಅರ್ಧ ಗಂಟೆಗೊಮ್ಮೆ ಬಸ್ ಸೌಕರ್ಯ ಕಲ್ಪಿಸುವಂತೆ ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.’
ಕರ್ನಾಟಕ ಲೋಕಾಯುಕ್ತ ಜಿಲ್ಲಾ ರಿಜಿಸ್ಟ್ರಾರ್ ಎನ್‍ಕ್ವಯರಿ ವಿಭಾಗದ ಹಿರಿಯ ನ್ಯಾಯಾಧೀಶರಾದ ಚೆನ್ನಕೇಶವ ರೆಡ್ಡಿ, ಕರ್ನಾಟಕ ಲೋಕಾಯುಕ್ತದ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ನಾರಾಯಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು, ಮೈಸೂರು ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಕೃಷ್ಣಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಮಡಿಕೇರಿ ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಲೋಕೇಶ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಇನ್ನಷ್ಟು ಮಾಹಿತಿ:-ಸಾರ್ವಜನಿಕ ನೌಕರರ ಕರ್ತವ್ಯ/ ದುರ್ನಡತೆಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಲು ಮತ್ತು ವರದಿ ಮಾಡಲು ಸ್ಥಾಪಿಸಲಾಗಿರುವ ಸಂಸ್ಥೆಯೇ ಕರ್ನಾಟಕ ಲೋಕಾಯುಕ್ತ ಸಂಸ್ಥೆ.
ಸಾರ್ವಜನಿಕ ಆಡಳಿತದಲ್ಲಿ ಗುಣಮಟ್ಟ ಸುಧಾರಿಸುವುದು, ಸಾರ್ವಜನಿಕ/ ಸರ್ಕಾರಿ ನೌಕರರ ದುರ್ನಡೆತೆಯಿಂದ ಸಂಭವಿಸಿದ ಕುಂದುಕೊರತೆ ನಿವಾರಣೆ ಮಾಡುವುದು, ತಪ್ಪಿತಸ್ಥರ ವಿರುದ್ದ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984, ಭ್ರಷ್ಟಾಚಾರ ತಡೆ ಕಾಯ್ದೆ 1988, ಕರ್ನಾಟಕ ನಾಗರಿಕ ಸೇವಾ ನಿಯಮಗಳು, 1958, ಕರ್ನಾಟಕ ನಾಗರಿಕ ಸೇವೆ(ನಡತೆ) ನಿಯಮಗಳು, 1966 ಹಾಗೂ ಕರ್ನಾಟಕ ನಾಗರಿಕ ಸೇವೆ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರನ್ವಯ ಶಿಸ್ತಿನ ಕ್ರಮಕ್ಕೆ ಸರ್ಕಾರಕ್ಕೆ/ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡುವುದು ಲೋಕಾಯುಕ್ತ ಸಂಸ್ಥೆಯ ಧ್ಯೇಯೋದ್ದೇಶವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.