ಸೋಮವಾರಪೇಟೆ ಜ.22 : ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ಕ್ರೀಡಾಕೂಟ ಸಹಕಾರಿಯಾಗಲಿವೆ ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅಭಿಪ್ರಾಯಪಟ್ಟಿದ್ದಾರೆ.
ಇಂದಿರಾಗಾಂಧಿ ಅಭಿಮಾನಿಗಳ ಸಂಘ ಹಾಗೂ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪ್ರಾರಂಭಗೊAಡ 36ನೇ ವರ್ಷದ ರಾಜ್ಯ ಮಟ್ಟದ ಬೆಳ್ಳಿಬಟ್ಟಲಿನ ಕಬಡ್ಡಿ ಹಾಗು ಅಂತರ್ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಎಲೆ ಮರೆಯ ಕಾಯಿಯಂತಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದುದು ನಮ್ಮ ಕರ್ತವ್ಯವಾಗಬೇಕೆಂದರು. ಕ್ರೀಡಾ ಜಿಲ್ಲೆಯಾದ ಕೊಡಗಿಮಲ್ಲಿ ಸಾಕಷ್ಟು ಸಂಖ್ಯೆಯ ಕ್ರೀಡಾಪಟುಗಳಿದ್ದು ಜಿಲ್ಲೆಯಲ್ಲಿ ಇದೀಗ ನಿರಂತರ ಕ್ರೀಡಾಚಟುವಟಿಕೆಗಳು ನಡೆಯಿತ್ತಿರುವುದ ಶ್ಲಾಘನೀಯ ಎಂದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಸಮಾಜ ಸೇವಕ ಕಾಟ್ನಮನೆ ಗಿರೀಶ್ ಮಾತನಾಡಿ, ಧೀಮಂತ ಪ್ರಧಾನಿಯಾಗಿದ್ದ ದಿವಂಗತ ಇಂದಿರಾಗಾಂಧಿಯವರ ಹೆಸರಿನಲ್ಲಿ ಇಂದಿಗೂ ಕ್ರೀಡಾಕೂಟ ನಡಿಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರ. ಅದರಲ್ಲೂ ಕೂಲಿ ಕಾರ್ಮಿಕರೇ ಹೆಚ್ಚು ಇರುವ ಸಂಘದ ಸದಸ್ಯರು ತಮ್ಮ ಶ್ರಮದ ಸ್ವಲ್ಪ ಭಾಗವನ್ನು ಕ್ರೀಡಾಕೂಟಗಳಿಗೆ ಮೀಸಲಿಡುತ್ತಿರುವುದು ಇತರರಿಗೂ ಮಾದರಿಯಾಗಿರಲಿ ಎಂದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಎಸ್.ವೆಂಕಪ್ಪ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ರೈತ ಮುಖಂಡ ಎಸ್.ಎಂ.ಕೃಷ್ಣ, ಜಮೀರ್, ಹಣಕೋಡು ಮಹೇಶ್, ಕ್ರೀಡಾ ವೀಕ್ಷಕ ವಿವರಣೆಕಾರ ಇಶಾಕ್ ಮತ್ತಿತರರು ಇದ್ದರು.
ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕಾರ್ಯದರ್ಶಿ ಎಚ್.ಬಿ.ರಾಜಪ್ಪ ಇದ್ದರು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*