ಸೋಮವಾರಪೇಟೆ ಜ.22 : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸೋಮವಾರಪೇಟೆ ಕಸಬಾ ಹೋಬಳಿಯ ಮಸಗೋಡು ಗ್ರಾಮದ ಸಿದ್ಧೇಶ್ವರ ಸಮುದಾಯ ಭವನದಲ್ಲಿ ನಡೆಯಿತು. ತಹಸೀಲ್ದಾರ್ ಎಸ್.ಎನ್. ನರಗುಂದ ಅವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಮಹಾತ್ವಾಕಾಂಕ್ಷೆಯ ಈ ಯೋಜನೆಯಿಂದ ಗ್ರಾಮೀಣ ಜನರು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ. ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದರೆ, ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ಸರ್ಕಾರದ ಯೋಜನೆಗಳಾದ ಇಂದಿರಾ ಗಾಂಧಿ ವೃದ್ಧಾಪ್ಯವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ಅಂತ್ಯಸAಸ್ಕಾರದ ಪರಿಹಾರ ಧನ, ರಾಷ್ಟಿçÃಯ ಕುಟುಂಬ ನೆರವು ಯೋಜನೆ, ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಗ್ರಾಮಗಳಿಗೆ ಸ್ಮಶಾನ ಕಲ್ಪಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಪರಿಹರಿಸಿಕೊಳ್ಳಲು ಸಾಧ್ಯ ಎಂದರು
ನೇರುಗಳಲೆ ಗ್ರಾ.ಪಂ ಉಪಾಧ್ಯಕ್ಷ ಪ್ರವೀಣ್ ಮಾತನಾಡಿ, ತಣ್ಣೀರುಹಳ್ಳ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಗ್ರಾಮದ 88 ಏಕರೆ ಪೈಸಾರಿ ಜಾಗದ, 10 ಏಕರೆ ಸ್ಥಳದಲ್ಲಿ 200 ಕುಟುಂಬಗಳು ವಾಸಿಸುತ್ತಿದ್ದಾರೆ. ಆದರೆ, ಸ್ಥಳಕ್ಕೆ ಯಾವುದೇ ದಾಖಲಾತಿ ಇಲ್ಲದಿರುವುದರಿಂದ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಮೂರು ಮುಕ್ಕಾಲು ಸೆಂಟ್ ನಿವೇಶನಕ್ಕೆ ದಾಖಲಾತಿ ಮಾಡಿಕೊಡಬೇಕು. ಸ್ಥಳದ ಹಿಡುವಳಿ ಸಮಸ್ಯೆ ಇರಬಹುದು ಸ್ಥಳ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ತಹಸೀಲ್ದಾರ್ ತಿಳಿಸಿದರು.ಇದೇ ಸಂದರ್ಭ ಪಂಚಾಯಿತಿ ಸದಸ್ಯ ವಿನಯ್ ಸಂಭ್ರಮ್ ಮಾತನಾಡಿ, ಗ್ರಾಮ ವಾಸ್ತವ್ಯ ಎಂಬುದು ಅತೀ ಹೆಚ್ಚು ಸಮಸ್ಯೆಗಳಿರುವ ಹಿಂದುಳಿದ ಗ್ರಾಮಗಳಲ್ಲೇ ನಡೆಯಬೇಕು. ತಹಸೀಲ್ದಾರರು ಗ್ರಾಮೀಣ ಸಮಸ್ಯೆಗಳನ್ನು ಹತ್ತಿರದಿಂದ ನೋಡಬೇಕು ಎಂದು ಹೇಳಿದರು.ಕಳೆದ ನಾಲ್ಕು ವರ್ಷಗಳಿಂದ ಕಾಲು ಸ್ವಾದೀನ ಕಳೆದುಕೊಂಡಿದ್ದೇನೆ. ಇದುವರೆಗೆ ಅಂಗವಿಕಲರಿಗೆ ಸಿಗಬೇಕಾದ ಸೌಲಭ್ಯ ಸಿಕ್ಕಿಲ್ಲ. ಮಡಿಕೇರಿ ಡಾಕ್ಟರ್ ಹತ್ತಿರ ಎರಡು ಬಾರಿ ಹೋಗಿದ್ದೇನೆ, ಯಾರು ಸಹಾಯ ಮಾಡುತ್ತಿಲ್ಲ ಎಂದು ಅಂಗವಿಕಲ ಶಿವರಾಜು ತಮ್ಮ ಅಸಹಾಯಕತೆ ತೋಡಿಕೊಂಡರು. ಸೂಕ್ತ ಸಲಹೆ ನೀಡಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಲೆಕ್ಕಿಗರಿಗೆ ತಹಸೀಲ್ದಾರ್ ಸೂಚಿಸಿದರು.ಕಂದಾಯ ಇಲಾಖೆ ಮತ್ತು ಸಂಧ್ಯಾ ಸುರಕ್ಷ ವೇತನ ಸೇರಿದಂತೆ ಪರಿಹಾರಕ್ಕಾಗಿ ಅರ್ಜಿ ಗ್ರಾಮಸ್ಥರು ಅರ್ಜಿ ಸಲ್ಲಿಸಿದರು. ಸಭೆಯಲ್ಲಿ.ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ
ಮಸಗೋಡು ಗ್ರಾಮದ ಅಧ್ಯಕ್ಷ ಭುವನ್, ಗ್ರಾ.ಪಂ ಸದಸ್ಯರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಇದ್ದರು.
Breaking News
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್‌ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*