ಸೋಮವಾರಪೇಟೆ ಜ.22 : ಹಸಿದ ಹೊಟ್ಟೆಗೆ ಅನ್ನ ನೀಡುವುದೇ ಮಾನವ ಧರ್ಮ. ಹಸಿವಿನಿಂದ ಯಾರು ಸಾಯಬಾರದು ಎಂದು ಜೀವನ ಪರ್ಯಂತ ತ್ಯಾಗಮಯ ಬದುಕು ಸವೆಸಿದ ಮಹಾನ್ ಚೇತನ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳು ಎಂದು ಬಸವಾಪಟ್ಟಣ ತೋಟಂದಾರ್ಯ ಸಂಸ್ಥಾನದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.
ಇಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ಆನೆಕೆರೆ ಸಮೀಪವಿರುವ ಡಾ. ಶ್ರೀ ಶಿವಕುಮಾರ್ ಸ್ವಾಮೀಜಿ ಬಸ್ ನಿಲ್ದಾಣದ ಆವರಣದಲ್ಲಿ ಲಿಂಗೈಕ್ಯ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ-ದಾಸೋಹ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣ ನವರ ‘ಕಾಯಕವೇ ಕೈಲಾಸ’ ನಿತ್ಯದಾಸೋಹದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು 1930ರಿಂದ ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೇ ಒಂದು ಧರ್ಮಕ್ಕೆ ಸ್ಥಿಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದರು.
ಮಠದಲ್ಲಿ 10ಸಾವಿರ ವಿದ್ಯಾರ್ಥಿಗಳಿಗೆ ವಿದ್ಯೆಕಲಿಯುತ್ತಿದ್ದು, ಅದರಲ್ಲಿ 3800 ವಿದಾರ್ಥಿ ಲಿಂಗಾಯುತ ಸಮುದಾಯಕ್ಕೆ ಸೇರಿದ್ದರೆ, 1860 ವಿದ್ಯಾರ್ಥಿಗಳು ಇಸ್ಲಾಂ ಧರ್ಮಕ್ಕೆ ಸೇರಿದವರು, ಬಡ ಕ್ರೆöÊಸ್ತರು, ಇತರೆ ಜನಾಂಗದವರು ವಿಧ್ಯೆ ಕಲಿತು ಉನ್ನತ ಹುದ್ದೆಗಳನ್ನು ಪಡೆದು ಉತ್ತಮ ಜೀವನ ನಡೆಸುತ್ತಿದ್ದಾರೆ ಎಂದರು.
ಗ್ರಾಮೀಣ ಭಾಗದಲ್ಲಿ ಬಸವ ತತ್ವ ಪ್ರಚಾರಕ್ಕಾಗಿ ಅತೀ ಹೆಚ್ಚು ಕಾಲ ಗ್ರಾಮೀಣ ಭಾಗದಲ್ಲೇ ಕಳೆದಿದ್ದಾರೆ. 21ನೇ ಶತಮಾನದ ಬಸವಣ್ಣನಾಗಿ ಜನರ ಸೇವೆ ಮಾಡಿದ್ದಾರೆ. ಮಠಕ್ಕೆ ಬಂದು ನಾನು ಬಡವ ಎಂದರೆ ತಾಯಿ ಹೃದಯದಿಂದ ಆಶ್ರಯ ನೀಡುತ್ತಿರು ಎಂದು ಸ್ಮರಿಸಿದರು. ಅವರ ಅದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅಲ್ಲದೆ ಪ್ರತಿವರ್ಷ ಶ್ರೀಗಳ ಜಯಂತಿ, ಸಂಸ್ಮರಣೋತ್ಸವ ನಡೆಸಬೇಕು ಎಂದು ಹೇಳಿದರು.
ಇದೇ ಸಂದರ್ಭ ಆನೆಕೆರೆ ಜಂಕ್ಷನ್‌ನಿಂದ ಬಸವೇಶ್ವರ ರಸ್ತೆಯವರೆಗಿನ ಪ್ರದೇಶವನ್ನು ಶ್ರೀ ಶಿವಕುಮಾರಸ್ವಾಮೀಜಿ ವೃತ್ತ ಎಂದು ನಾಮಕರಣ ಮಾಡಿದ್ದು, ಈ ಸಂಬoಧ ಅಳವಡಿಸಿರುವ ನಾಮಫಲಕವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಜೀವನಾದರ್ಶಗಳು ಸಾರ್ವಕಾಲಿಕವಾಗಿದ್ದು, ಅವರ ಮಾರ್ಗದರ್ಶನದಂತೆ ಎಲ್ಲರೂ ಜೀವಿಸಬೇಕು ಎಂದು ಹೇಳಿದರು.
ಶ್ರೀ ಶಿವಕುಮಾರ ಸ್ವಾಮೀಜಿಗಳು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಎಲ್ಲಾ ಧರ್ಮ, ವರ್ಗಗಳನ್ನು ಸಮಾನವಾಗಿ ಕಂಡು ಸೇವೆಯೇ ಪರಮೋಚ್ಚ ಕಾಯಕವೆಂದು ಭಾವಿಸಿ ನುಡಿದಂತೆ ನಡೆದ ಶ್ರೀಗಳ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ರಂಜನ್ ಅಭಿಪ್ರಾಯಿಸಿದರು.
ಮುದ್ದಿನಕಟ್ಟೆ ಮಠಾಧೀಶರಾದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ತಪೋಕ್ಷೇತ್ರ ಮನೆಹಳ್ಳಿ ಮಠಾಧೀಶರಾದ ಮಹಾಂತ ಶಿವಲಿಂಗ ಸ್ವಾಮೀಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ನಿವೃತ್ತ ಪ್ರಾಧ್ಯಾಪಕ ಧರ್ಮಪ್ಪ ಅವರುಗಳು ಉಪಸ್ಥಿತರಿದ್ದು, ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸದಸ್ಯರುಗಳಾದ ಶೀಲಾ ಡಿಸೋಜ, ಎಸ್.ಆರ್. ಸೋಮೇಶ್, ಶರತ್‌ಚಂದ್ರ, ಆರೋಗ್ಯ ನಿರೀಕ್ಷಕ ಜಾಸಿಂ ಖಾನ್, ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಹಾಲಪ್ಪ, ವಿದ್ಯಾ ನರ್ಸಿಂಗ್ ಇನ್ಸ್ಟಿಟ್ಯೂಟ್‌ನ ಅಲೀಮಾ, ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಸ್. ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ನೂರಾರು ಮಂದಿಗೆ ಅನ್ನದಾಸೋಹ ನೆರವೇರಿತು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್‌ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*