ವಿರಾಜಪೇಟೆ ಜ.22 : ಕನ್ನಡ ಭಾಷೆಯ ರಕ್ಷಣೆ ಇಲ್ಲಿ ಸೇರಿರುವ ಪ್ರತಿಯೊಬ್ಬ ಕನ್ನಡಾಭಿಮಾನಿಗಳ ಮೇಲೆ ಹೊಣೆಗಾರಿಕೆಯಾಗಿ ನಿಂತಿದೆ, ಅದು ನಮ್ಮ ಕರ್ತವ್ಯವೂ ಆಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ರಾಜ್ಯ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಅಭಿಪ್ರಾಯ ಪಟ್ಟರು.
ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿ÷ಸಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಎ.ಎಸ್ ಪೊನ್ನಣ್ಣ ಭಾಷೆಯ ಅಳಿವಿಗೆ ಕಾರಣಗಳು ಹಲವಾರು, ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಭಾಷೆಯ ಉಳಿವಿಗಾಗಿ ಸಾಹಿತ್ಯದ ಬೆಳವಣಿಗೆಗೆ ತನ್ನಿಂದ ಎಲ್ಲ ಸಹಕಾರ ನೀಡಲು ಬದ್ದ ಎಂದು ಹೇಳಿದರು.
ಸಾಹಿತ್ಯ ಕ್ಷೇತ್ರದಲ್ಲಿ ಪುಷ್ಪಲತಾ ಶಿವಪ್ಪ, ಶಿಕ್ಷಣ ಕ್ಷೇತ್ರದಲ್ಲಿ ಪೆರಿಗ್ರೀನ್ ಮಚ್ಚಾಡೋ, ಸೈನಿಕರ ಕ್ಷೇತ್ರದಲ್ಲಿ ಭವಾನಿ ಶಂಕರ್, ವಿಶಿಷ್ಟ ಸೇವಾ ಪದಕ ಬ್ರಿಗೇಡಿಯರ್ ಪಿ.ಟಿ ಮೊಣ್ಣಪ್ಪ, ಸಹಕಾರ ಕ್ಷೇತ್ರ ಚಂದಪ್ಪAಡ ಬಿ, ನಂಜಪ್ಪ ಜಾನಪದ ಕ್ಷೇತ್ರ ಕುಡಿಯರ ಗೋಪಮ್ಮ, ರಂಗಭೂಮಿ ತಾತಂಡ ಪ್ರತಾಪ್, ಕಬಡ್ಡಿ ಭರತ್ ಎಂ. ಆರ್, ದೇಶ ಸೇವೆಗೆ ಪಟ್ರಪಂಡ ಮೊಣ್ಣಪ್ಪ, ಸಮಾಜ ಸೇವೆ ಸಫೀರ್ ಎ.ಎ. ನಾಟಿ ವೈದ್ಯರು ನಟರಾಜ್, ಸಮಾಜ ಸೇವೆಗೆ ರತಿ, ಭರತನಾಟ್ಯದಲ್ಲಿ ಕುಮಾರಿ ಸಾನಿಧ್ಯ, ಹಾಕಿಯಲ್ಲಿ ದೇಶ್ ಪೂವಯ್ಯ ಅವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಸ್‌ಎಸ್‌ಎಲ್‌ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಾದ ಜೇಮ್ಸ್, ಸನಾ ಫಾತೀಮ, ಧನ್ಯ, ಯಶಸ್ವಿನಿ, ಭವಿಶ್, ಯುಕ್ತಿ ಗೌರಮ್ಮ, ನಿಶಾನ್, ಕಾವೇರಮ್ಮ, ನೌಷಿರ, ನಿಶಾನ, ಸಾನಿಯಾ, ಶಿಯಾ, ಸೇರಿದಂತೆ ಇನ್ನಿತರ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವ್ ಕಾಮತ್, ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ, ಸಮ್ಮೇಳನಾಧ್ಯಕ್ಷ ಡಾ. ಎಸ್ ವಿ ನರಸಿಂಹನ್, ಆರ್ಜಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜನ್ ಉಪಸ್ಥಿತರಿದ್ದರು. ಶಿಕ್ಷಕ ಎ.ವಿ ಮಂಜುನಾಥ್ ಸ್ವಾಗತಿಸಿದರೆ, ಉಪನ್ಯಾಸಕ ಶಾಂತಿ ಭೂಷಣ್ ನಿರೂಪಿಸಿ ವಂದಿಸಿದರು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*