ಮಡಿಕೇರಿ ಜ.23 : ವಿದ್ಯಾರ್ಥಿಗಳ ಸೃಜನಶೀಲ ಅಭಿವ್ಯಕ್ತಿಯನ್ನು ಉತ್ತೇಜಿಸಲು, ಶಿಕ್ಷಣ ಸಚಿವಾಲಯವು ದೇಶಾದ್ಯಂತ ಶಾಲೆಗಳಲ್ಲಿ ವಿವಿಧ ಚಟುವಟಿಕೆ ಆಯೋಜಿಸಿದೆ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರುಣ್ ಸಿಂಗ್ ಅವರು ಮಾಹಿತಿ ನೀಡಿದರು.
ಜನವರಿ 27 ರಂದು ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಅಂಗವಾಗಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ ಚಿತ್ರಕಲಾ ಸ್ಪರ್ಧೆಯ ಬಗ್ಗೆ ಅವರು ಮಾಹಿತಿ ನೀಡಿದರು.
ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸಲಾಗುತ್ತಿದೆ. ಇದು ಮಹಾನ್ ನಾಯಕನ ಜೀವನದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಲು ಮತ್ತು ಅವರಲ್ಲಿ ದೇಶಭಕ್ತಿಯ ಮನೋಭಾವವನ್ನು ತುಂಬಲು ಏಕಕಾಲದಲ್ಲಿ ವಿದ್ಯಾರ್ಥಿಗಳ ನಡುವಿನ ಪರೀಕ್ಷಾ ಒತ್ತಡವನ್ನು ನಿಭಾಯಿಸುವ ವಿಶಿಷ್ಟ ಉಪಕ್ರಮದಲ್ಲಿ ದೇಶಾದ್ಯಂತ 500 ವಿವಿಧ ಕೇಂದ್ರೀಯ ವಿದ್ಯಾಲಯಗಳಲ್ಲಿ ರಾಷ್ಟ್ರವ್ಯಾಪಿ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಚಿತ್ರಕಲೆ ಸ್ಪರ್ಧೆಯಲ್ಲಿ ವಿವಿಧ ಸಿಬಿಎಸ್‌ಇ ಶಾಲೆಗಳ ವಿದ್ಯಾರ್ಥಿಗಳು, ರಾಜ್ಯ ಮಂಡಳಿ, ನವೋದಯ ವಿದ್ಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಗಳ ವಿದ್ಯಾರ್ಥಿಗಳು ಈ ಅನನ್ಯ ಸೃಜನಶೀಲ ಕಲ್ಪನೆಗಳ ಅಭಿವ್ಯಕ್ತಿಯಲ್ಲಿ ಭಾಗವಹಿಸಿದ್ದಾರೆ ಎಂದರು.
ಪ್ರಧಾನಮಂತ್ರಿ ಅವರು ಬರೆದಿರುವ ಪುಸ್ತಕವನ್ನು ಆಧರಿಸಿ ‘ಪರೀಕ್ಷಾ ವಾರಿಯರ್’ ಆಗುವುದು ಸ್ಪರ್ಧೆಯ ವಿಷಯವಾಗಿದೆ. ದೇಶಾದ್ಯಂತ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟು 50 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 100 ವಿದ್ಯಾರ್ಥಿಗಳು ಭಾಗವಹಿಸಿದರು. ಜಿಲ್ಲೆಯ ರಾಜ್ಯ ಬೋರ್ಡ್ ಮತ್ತು ಸಿಬಿಎಸ್‌ಇ ಶಾಲೆಗಳ ಹತ್ತಿರದ ಶಾಲೆಗಳಿಂದ 70, ನವೋದಯ ವಿದ್ಯಾಲಯ 10, ನೋಡಲ್ ಕೇಂದ್ರೀಯ ವಿದ್ಯಾಲಯಗಳು ಮತ್ತು ಹತ್ತಿರದ ಕೇಂದ್ರೀಯ ವಿದ್ಯಾಲಯಗಳಿಂದ 20 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು.
ಅತ್ಯುತ್ತಮ ಐದು ಚಿತ್ರಕಲೆಗಳಿಗೆ ಸ್ವಾತಂತ್ರ‍್ಯ ಹೋರಾಟಗಾರರ ಪುಸ್ತಕಗಳು, ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳು ಮತ್ತು ಪ್ರಮಾಣಪತ್ರ ನೀಡಲಾಗುತ್ತದೆ. ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ವಾರಿಯರ್ ಪುಸ್ತಕ ನೀಡಲಾಗುವುದು ಎಂದು ಅವರು ಹೇಳಿದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*