ವಿರಾಜಪೇಟೆ ಜ.23 : ಬಿಳುಗುಂದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬವನ್ನು ಏರ್ಪಡಿಸಲಾಗಿತ್ತು. ಬಿಳುಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಐನಂಡ ಪ್ರತಾಪ್ ಪ್ಯಾರಾಚೂಟ್ ಮಾದರಿಯನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಷಯ ಪರಿವೀಕ್ಷಕರಾಗಿ ಆಗಮಿಸಿದ ಕೆ.ಆರ್.ಬಿಂದು ಪ್ರಾಸ್ತಾವಿಕವಾಗಿ ಮಾತನಾಡಿ ಕೋವಿಡ್ 19ರ ನಂತರ ಕೊರತೆಯಾದ ಕಲಿಕೆಯನ್ನು ಪೂರೈಸಲು ಚೇತೆರಿಕೆ ಬೋಧನೆಗೆ ಅವಕಾಶ ನೀಡಲಾಗಿತ್ತು. ಕಲಿಕಾ ಹಬ್ಬದ ಮೂಲಕ ಈ ಹಬ್ಬವನ್ನು ರಾಜ್ಯದಾದ್ಯಂತ ಆಚರಿಸಲಾಗುತ್ತಿದೆ. ಬಿಳುಗುಂದ ಶಾಲೆಯಲ್ಲಿ ಸುಂದರವಾಗಿ ಕಲಿಕಾ ಹಬ್ಬವನ್ನು ಆಯೋಜಸಿದ ಸರ್ವರಿಗೂ ಧನ್ಯವಾದಗಳನ್ನು ತಿಳಿಸಿದರು. ಕಾರ್ಯಕ್ರಮದ ಮೊದಲಿಗೆ ಬಿಳುಗುಂದ ಗ್ರಾಮ ಪಂಚಾಯತಿ ಕಚೇರಿಯಿಂದ ಶಾಲೆಯವರೆಗೆ ಶಾಲಾಮಕ್ಕಳ ಮೆರವಣಿಗೆಯನ್ನು ನಡೆಸಲಾಯಿತು. ತದನಂತರ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಕಬ್ಬಿಣದ ಕಮಾನನ್ನು ದಾನಿಗಳಾದ ಅಹಮ್ಮದ್ ನಲ್ವತ್ತೊಕ್ಲು ಇವರು ರಿಬ್ಬನ್ ಕತ್ತರಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಈ ವರ್ಷದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಬಿಳುಗುಂದ ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಸಾವಿತ್ರಿ ಹಾಗೂ ಈ ವರ್ಷದ ಉದ್ದ ಜಿಗಿತದಲ್ಲಿ ರಾಜ್ಯಮಟ್ಟದ ವನ್ನು ಪ್ರತಿನಿಧಿಸಿದ ಶಾಲಾ ವಿದ್ಯಾರ್ಥಿ ಇರ್ಫಾನ್, ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ ಅಲ್ ಅಮೀನ್ ಹಾಗೂ ದಾನಿಗಳಾದ ಅಹಮ್ಮದ್ ರವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶೈಲ ಬೀಳಗಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮೀ ಸದಸ್ಯರಾದ ರಂಜನ್, ಹನೀಫ್, ಲೀಲಾವತಿ, ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಅಮ್ಮತ್ತಿ ಶಾಲೆಯ ಅಧ್ಯಕ್ಷೆ ಹೇಮಾವತಿ, ದಾನಿಗಳಾದ ಐನಂಡ ಗಣಪತಿ, ವಿಕಲಚೇತನ ಸಂಘದ ಅಧಿಕಾರಿ ಸಿರಾಜುದ್ದೀನ್ ಮಾಜಿ ಸೈನಿಕರಾದ ಸಾದಲಿ, ದಾನಿಗಳಾದ ಸುಗುಣ, ಸಿ ಆರ್ ಪಿ ಗಳಾದ ಸುಷಾ, ಪ್ರವೀಣ್, ಶಿಕ್ಷಕರ ಸಂಘದ ಪದಾಧಿಕಾರಿ ಪದ್ಮ, ಶಾಲೆಯ ಮುಖ್ಯ ಶಿಕ್ಷಕಿ ಅರುಣ ಆ್ಯನ್ಸಿ ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಸಾವಿತ್ರಿ ನೆರವೇರಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*