ಮಡಿಕೇರಿ ಜ.23 : ಕೊಡಗು ಪ್ರೆಸ್‌ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-3ರಚಾಂಪಿಯನ್ ಆಗಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಹೊರಹೊಮ್ಮಿದೆ. ಅಂತಿಮ ಕ್ಷಣದಲ್ಲಿ ಎಡವಿದ ಇಂಚರ ಕೊಡಗು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಂದ ಬೆಳಕಿನ ಕಾರಣದಿಂದ 2 ಓವರ್‌ಗೆ ನಡೆದ ಫೈನಲ್ ಪಂದ್ಯದಲ್ಲಿಟಾಸ್‌ಗೆದ್ದ ಇoಚರ ಕೊಡಗು ತoಡ ಬ್ಯಾಟಿಂಗ್ ಆಯ್ದುಕೊಂಡಿತು.ಆದರೆ, ಬ್ಯಾಟಿಂಗ್‌ನಲ್ಲಿ ಆಟಗಾರರು ಎಡವಿದ್ದರಿoದ 2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 7 ರನ್ ಗಳಿಸಲಷ್ಟೇ ಶಕ್ತರಾದರು.ಗೆಲ್ಲಲು 8 ರನ್‌ಗಳ ಗುರಿ ಪಡೆದ ಮೀಡಿಯಾ ಸೂಪರ್ ಕಿಂಗ್ಸ್ ಮೊದಲ ಓವರ್‌ನಲ್ಲಿ ಇನ್ನು ಒಂದು ಎಸೆತ ಬಾಕಿ ಇರುವಾಗಲೇ ವಿಕೆಟ್ ಕಳೆದುಕೊಳ್ಳದೆ 11 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮೀಡಿಯಾ ಸೂಪರ್ ಕಿಂಗ್ಸ್ ತಂಡದ ಪರ ಮಂಜು 3 ಎಸೆತಗಳಲ್ಲಿ 9 ರನ್ ಗಳಿಸಿದರಲ್ಲದೆ 1 ವಿಕೆಟ್ ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಇoಚರ ಕೊಡಗುತoಡ ಬೌಲಿಂಗ್ ಆಯ್ದುಕೊoಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸೆನ್ಸಾ ಕುಶಾಲನಗರತಂಡ 4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 50 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಇಂಚರ ಕೊಡಗು ತoಡ 3.2 ಓವರ್‌ಗಳಲ್ಲಿಯೇ 51 ರನ್ ಗಳಿಸಿ ಫೈನಲ್ ಪ್ರವೇಶಿಸಿತು.
ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ ಮೀಡಿಯಾ ಸೂಪರ್ ಸೂಪರ್ ಕಿಂಗ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಕೂರ್ಗ್ ಮೌಂಟ್ಸ್ ಲಯನ್ಸ್ ತಂಡ 4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 25 ರನ್ ಗಳಿಸಲಷ್ಟೇ ಶಕ್ತವಾಯಿತು.ಅಲ್ಪ ಮೊತ್ತದಗುರಿ ಬೆನ್ನಟ್ಟಿದ ಮೀಡಿಯಾ ಸೂಪರ್ ಕಿಂಗ್ಸ್ ತಂಡ 2 ಓವರ್‌ಗಳಲ್ಲಿಯೇ ವಿಕೆಟ್ ಕಳೆದುಕೊಳ್ಳದೆ 26 ರನ್ ಗಳಿಸಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅವಕಾಶ ಪಡೆಯಿತು.
2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಸೆನ್ಸಾ ಕುಶಾಲನಗರ ತಂಡ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಮೀಡಿಯಾ ಸೂಪರ್ ಕಿಂಗ್ಸ್ ತಂಡ 4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿತು. ಗೆಲ್ಲಲು ಬೇಕಿದ್ದ 46 ರನ್‌ಗಳ ಗುರಿ ಬೆನ್ನಟ್ಟಿದ ಸೆನ್ಸಾ ಕುಶಾಲನಗರ ತಂಡ 4 ಓವರ್‌ಗಳಲ್ಲಿ 41 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.
ಉಳಿದಂತೆ ಮೀಡಿಯಾ ವಾರಿಯರ್ಸ್, ಮೀಡಿಯಾಕೂಲ್, ಮೀಡಿಯಾಕ್ಯಾಪ್ಟನ್ 12, ಗೋಣಿಕೊಪ್ಪ ಮೀಡಿಯಾಕಿಂಗ್ಸ್ ತಂಡಗಳು ಪಾಲ್ಗೊಂಡಿದ್ದವು. ಐಪಿಎಲ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆಯ 107 ಪತ್ರಕರ್ತರು ಪಾಲ್ಗೊಂಡಿದ್ದರು. ತೀರ್ಪುಗಾರರಾಗಿ ರಮೇಶ್, ಮಂಜು, ಸಚಿನ್‌ಕಾರ್ಯನಿರ್ವಹಿಸಿದರು.
ವೈಯಕ್ತಿಕ ಬಹುಮಾನ
ಮ್ಯಾನ್‌ಆಫ್ ದಿ ಸೀರಿಸ್ : ಮಂಜು
ಬೆಸ್ಟ್ಕ್ಯಾಚ್: ಪ್ರೇಮ್
ಮ್ಯಾನ್‌ಆಫ್ ದಿ ಮ್ಯಾಚ್ ಫೈನಲ್: ಮಂಜು
ಬೆಸ್ಟ್ಎನೆರ್ಜಿಟಿಕ್ ಪ್ಲೇಯರ್: ಲೋಹಿತ್
ಬೆಸ್ಟ್ ಬೌಲರ್: ಮುಸ್ತಾಫಾ
ಬೆಸ್ಟ್ ಫೀಲ್ಡರ್: ಇಸ್ಮಾಯಿಲ್
ಬೆಸ್ಟ್ಆಲ್‌ರೌಂಡರ್: ಆದರ್ಶ್
ಬೆಸ್ಟ್ ಬ್ಯಾಟ್ಸ್ಮೆನ್: ಜಯಪ್ರಕಾಶ್
ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್: ಮಂಜು
ಬೆಸ್ಟ್ ಸೀನಿಯರ್ ಪ್ಲೇಯರ್: ಪಾರ್ಥಚಿನ್ನಪ್ಪ
ಬೆಸ್ಟ್ ವುಮೆನ್ ಪ್ಲೇಯರ್: ಚೈತನ್ಯ
ಬೆಸ್ಟ್ ವಿಕೇಟ್‌ಕೀಪರ್: ಚನ್ನನಾಯಕ್
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*