ಮಡಿಕೇರಿ ಜ.23 : ಬದಲಾದ ಕಾಲಮಾನಕ್ಕೆ ಅನುಗುಣವಾಗಿ ಪತ್ರಕರ್ತರೂ ತಾಂತ್ರಿಕವಾಗಿ ‘ಅಪ್‌ಡೇಟ್’ ಆಗುವ ಅಗತ್ಯವಿದೆ ಎಂದು ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಮಹಾಪೋಷಕ ಜಿ.ರಾಜೇಂದ್ರ ಅಭಿಪ್ರಾಯಪಟ್ಟರು. ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕೊಡಗು ಪ್ರೆಸ್‌ಕ್ಲಬ್ ಪ್ರೀಮಿಯರ್ ಲೀಗ್– 3 ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಮೊದಲೆಲ್ಲಾ ಪತ್ರಕರ್ತರು ಡೈರಿ, ಪೆನ್ ಹಿಡಿದುಕೊಂಡು ಹೋಗುತ್ತಿದ್ದರು. ಆದರೆ ಈಗ ಮೊಬೈಲ್ ಒಂದುಇದ್ದರೆ ಸಾಕು, ಎಲ್ಲಾ ಕೆಲಸವನ್ನೂ ಸುಲಭವಾಗಿ ಮಾಡಬಹುದಾಗಿದೆ ಎಂದರು.
ಪತ್ರಕರ್ತರ ಒತ್ತಡದ ಬದುಕಿನಲ್ಲಿ ಉಲ್ಲಾಸ ತುಂಬಲು ಕ್ರೀಡಾ ಚಟುವಟಿಕೆಗಳು ಹೆಚ್ಚು ಅನುಕೂಲವಾಗಿದೆ. ಕ್ರಿಕೆಟ್ ಬಾಂಧವ್ಯ ಬೆಸೆಯುತ್ತದೆ ಎಂದು ಹೇಳಿದರು.
ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಮಾತನಾಡಿ, ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿದೆ. ಇದೇ ರೀತಿಯಲ್ಲಿ ಬೆಳ್ಳಿಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಸಾಂಸ್ಕೃತಿ ಸೇರಿದಂತೆ ಎಲ್ಲಾ ಬಗೆಯ ಕಾರ್ಯಕ್ರಮಗಳಲ್ಲೂ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾರೈ ಮಾತನಾಡಿ, ಜಿಲ್ಲೆಯಾದ್ಯಂತ ಕರ್ತವ್ಯ ನಿರ್ವಹಿಸುವ ವೃತ್ತಿ ಬಾಂಧವರನ್ನು ಪರಸ್ಪರ ಪರಿಚಯಿಸಲು, ಉತ್ತಮ ಸಂಬAಧ ಬೆಳೆಸಿಕೊಳ್ಳಲು ಕ್ರಿಕೆಟ್ ಸಹಕಾರಿ ಆಗಿದೆ ಎಂದು ಹೇಳಿದರು.
ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಪತ್ರಕರ್ತರು ಪಾಲ್ಗೊಂಡಿದ್ದ ಪಂದ್ಯಾವಳಿ ಇದಾಗಿತ್ತು. ಈ ಆವೃತ್ತಿಯೂ ಯಶಸ್ವಿಯಾಗಿ ನಡೆದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರೆಸ್‌ಕ್ಲಬ್ ಖಜಾಂಚಿ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರೆಸ್‌ಕ್ಲಬ್ ಪ್ರೀಮಿಯರ್ ಲೀಗ್– 3 ಸಂಚಾಲಕ ನವೀನ್ ಡಿಸೋಜಾ ವೇದಿಕೆಯಲ್ಲಿ ಇದ್ದರು. ತಂಡಗಳ ಮಾಲೀಕರು, ನಾಯಕರು ತಮ್ಮ ಅಭಿಪ್ರಾಯ ಹಂಚಿಕೊAಡರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಜ್ಞಾ ರಾಜೇಂದ್ರ ಪ್ರಾರ್ಥಿಸಿ, ಚಂದ್ರಮೋಹನ್ ಸ್ವಾಗತಿಸಿದರು.











