ಮಡಿಕೇರಿ ಜ.24 : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷರಾಗಿ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಎಂ.ಕೆ.ಅಪ್ಪಯ್ಯ ಆಯ್ಕೆಯಾಗಿದ್ದಾರೆ.
ಪಕ್ಷದ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.
ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಅವರು ಮುಂದುವರಿಯಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂಚಿತ್ ಸಹಾನಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಭಾಸ್ಕರ್ ರಾವ್, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಮಾಧ್ಯಮ ಸಂವಹನ ಉಸ್ತುವಾರಿಯನ್ನಾಗಿ ಬ್ರಿಜೇಶ್ ಕಾಳಪ್ಪ ಅವರು ಆಯ್ಕೆ ಮಾಡಲಾಗಿದೆ.










