ಮಡಿಕೇರಿ ಜ.24 : ದಕ್ಷಿಣ ಕೊಡಗಿನಲ್ಲಿ ಹುಲಿ ಉಪಟಳ ಮತ್ತೆ ಮಿತಿ ಮೀರಿದೆ. ಕಳೆದ ಎರಡು ದಿನಗಳಲ್ಲಿ ನಾಲ್ಕು ಜಾನುವಾರುಗಳನ್ನು ಹುಲಿ ಕೊಂದು ಹಾಕಿದೆ.
ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಇಂದು ಹುಲಿ ದಾಳಿ ಮಾಡಿದ್ದು, ಪಿ.ಲವ ಎಂಬುವವರಿಗೆ ಸೇರಿದ ಹಸುವನ್ನು ಬಲಿ ಪಡೆದಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಿರಂತರ ದಾಳಿ ಮಾಡುತ್ತಿರುವ ಹುಲಿ ಜಾಡನ್ನು ಪತ್ತೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇತ್ತೀಚೆಗಷ್ಟೇ ಬಿಟ್ಟಂಗಾಲ ಸಮೀಪ 2 ನೇ ರುದ್ರಗುಪ್ಪೆ ಗ್ರಾಮದಲ್ಲಿ ಎ.ಧನು ಎಂಬುವವರಿಗೆ ಸೇರಿದ ಮೂರು ಕರುಗಳನ್ನು ಹುಲಿ ಕೊಂದು ಹಾಕಿತ್ತು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*