ಮಡಿಕೇರಿ ಜ.24 : ವ್ಯಕ್ತಿಯೊಬ್ಬರಿಂದ 2 ಸಾವಿರ ರೂ. ನಗದು ಮತ್ತು 1 ಬಾಟಲಿ ಮದ್ಯ ಸ್ವೀಕರಿಸುತ್ತಿದ್ದ ಸಂದರ್ಭ ಮಡಿಕೇರಿ ಸರ್ವೇ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸರ್ವೇಯರ್ ಆಗಿರುವ ಮಾದಪ್ಪ ಎಂಬುವವರೇ ವಿಚಾರಣೆಗೊಳಪಟ್ಟಿರುವ ಆರೋಪಿ. 2 ಸಾವಿರ ನಗದು ಹಾಗೂ 1 ಮದ್ಯದ ಬಾಟಲಿಯನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರೆಸಲಾಗಿದೆ.
ಚೇರAಬಾಣೆ ಬಾಡಗ ಗ್ರಾಮದ ವ್ಯಕ್ತಿಯೊಬ್ಬರು 2 ಸರ್ವೇ ನಂಬರ್‌ಗಳಲ್ಲಿ ಕಾಫಿ ತೋಟ ಹೊಂದಿದ್ದು, ಮನೆ ನಿರ್ಮಿಸುವ ಸಲುವಾಗಿ ನಿವೇಶನ ಮಾಡಲು ಮುಂದಾಗಿದ್ದರು. ಈ ಸ್ಥಳದಲ್ಲಿ 3 ಬೀಟೆ ಮರಗಳಿದ್ದು, ಅದನ್ನು ತೆರವು ಮಾಡುವುದು ಮತ್ತು ನಿವೇಶನವನ್ನಾಗಿ ಪರಿವರ್ತಿಸಲು ಸ್ಥಳದ ಸರ್ವೇ ನಡೆಸಬೇಕಿತ್ತು. ಈ ಹಿನ್ನೆಲೆಯಲ್ಲಿ ಕಳೆದ 6 ತಿಂಗಳ ಹಿಂದೆ ಮಡಿಕೇರಿ ಸರ್ವೇ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಮಾತ್ರವಲ್ಲದೇ ಸರ್ವೇಗಾಗಿ ಸರಕಾರ ನಿಗದಿಪಡಿಸಿದ್ದ ಶುಲ್ಕವನ್ನೂ ಪಾವತಿ ಮಾಡಿದ್ದರು.
ಈ ವೇಳೆ ಸರ್ವೇಯರ್ ಮಾದಪ್ಪ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ. ಇಂದು ಅರ್ಜಿದಾರರಿಂದ ಆರೋಪಿ ಮಾದಪ್ಪ ಅವರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ 2 ಸಾವಿರ ರೂ. ನಗದು ಮತ್ತು 1 ಮದ್ಯದ ಬಾಟಲಿಯನ್ನು ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.
ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕೊಡಗು ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್, ವೃತ್ತನಿರೀಕ್ಷಕ ಲೋಕೇಶ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*