ಸೋಮವಾರಪೇಟೆ ಜ.25 : ಶಾಸಕರ ಕಚೇರಿಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ 8ನೇ ಸಮ್ಮೇಳನ ಫೆ.11 ರಂದು ಗೌಡಳ್ಳಿ ಬಿಜಿಎಸ್ ಮೈದಾನದಲ್ಲಿ ಆಯೋಸಲಾಗಿದ್ದು, ಸಮ್ಮೇಳನದ ಲಾಂಛನವನ್ನು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಅಪ್ಪಚ್ಚು ರಂಜನ್ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ 8ನೇ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಉಪಸಮಿತಿಗಳ ಪದಾಧಿಕಾರಿಗಳು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲು ಕೋರಿದರು. ಹಾಗೂ ಎಲ್ಲಾ ಸಾಹಿತ್ಯ ಆಸಕ್ತರು, ಸಂಘ ಸಂಸ್ಥೆಗಳ ಪ್ರಮುಖರು ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಡಿ. ವಿಜೇತ್, ನಿಕಟಪೂರ್ವ ಅಧ್ಯಕ್ಷ ಹೆಚ್. ಜೆ. ಜವರಪ್ಪ, ಕಾರ್ಯದರ್ಶಿ, ಎ. ಪಿ. ವೀರರಾಜ್, ಸದಸ್ಯರಾದ ಎಂ.ಬಿ. ಅಭಿಮನ್ಯು ಕುಮಾರ್, ಜಲಾ ಕಾಳಪ್ಪ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು.














