ಮಡಿಕೇರಿ ಜ.25 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 2002 ರ ಫೆಬ್ರವರಿ 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ 4704 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 4683 ಪ್ರಕರಣಗಳು ಇತ್ಯರ್ಥಗೊಡಿರುತ್ತದೆ. 2022-23ನೇ ಆರ್ಥಿಕ ಸಾಲಿನಲ್ಲಿ ಒಟ್ಟು 222 ಪ್ರಕರಣಗಳು ದಾಖಲಾಗಿ 201 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 21 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್.ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
Breaking News
- *ನ.14 ರಂದು ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ*
- *ಎಂಬಿಎ ಮತ್ತು ಎಂಸಿಎ ವಿಭಾಗದ ಫಲಿತಾಂಶ ಪ್ರಕಟ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿಗೆ ಶೇ.100 ಫಲಿತಾಂಶ*
- *71ನೇ ಅಖಿಲ ಭಾರತ ಸಹಕಾರ ಸಪ್ತಾಹ : ನ.14 ರಂದು ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಉದ್ಘಾಟನಾ ಕಾರ್ಯಕ್ರಮ*
- *ನ.17ರಂದು ಉಡೋತ್ಮೊಟ್ಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
- *ಅರೆಭಾಷೆ ಗಡಿನಾಡ ಉತ್ಸವ ಕ್ರೀಡಾಕೂಟ : ಬಲಮುರಿ ತಂಡ ಚಾಂಪಿಯನ್*
- *ಅಮ್ಮತ್ತಿ : ಮಿನಿ ಒಲಿಂಪಿಕ್ಸ್ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ : ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಸಲಹೆ*
- *10ಹೆಚ್ಪಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡದಿದ್ದಲ್ಲಿ ಹೋರಾಟ : ಮನು ಸೋಮಯ್ಯ*
- *ಸೋಮವಾರಪೇಟೆ : ಸಿ ಮತ್ತು ಡಿ ಭೂಮಿ ತೆರವಿಗೆ ವಿರೋಧ : ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲು ರೈತರ ನಿರ್ಧಾರ*
- *ಮಡಿಕೇರಿ ಸವಿತಾ ಸಮಾಜದ ವಾರ್ಷಿಕ ಮಹಾಸಭೆ : ಅಧ್ಯಕ್ಷರಾಗಿ ಎಂ.ಟಿ.ಮಧು ಪುನರಾಯ್ಕೆ*
- *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ : ಆ್ಯಂಬುಲೆನ್ಸ್ ಸೇವೆ ಲಭ್ಯ*