ಮಡಿಕೇರಿ ಜ.25 : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಭವನ ಉದ್ಘಾಟನಾ ಕಾರ್ಯಕ್ರಮವು ಜ.26 ರಂದು ಮಧ್ಯಾಹ್ನ 12 ಗಂಟೆಗೆ ಗಾಂಧಿಭವನದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಶಾಸಕರಾದ ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಮುಖ್ಯಮಂತ್ರಿಗಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೊಡಗು ಉಸ್ತುವಾರಿ ಸಚಿವರು ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ವಿ.ಅನ್ಬುಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಆಕಾಶ್ ಎಸ್., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ.ಮುರಳಿಧರ ಇತರರು ಪಾಲ್ಗೊಳ್ಳಲಿದ್ದಾರೆ.









