ವಿರಾಜಪೇಟೆ ಜ.25 : ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ.ಲೋಕೇಶ್ ಗಿಡಕ್ಕೆ ನೀರು ಹಾಕುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮತದಾನವು ಪ್ರತಿಯೊಬ್ಬರ ಹಕ್ಕಾಗಿದ್ದು, ನಮ್ಮ ಹಕ್ಕನ್ನು ಅರಿತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಭವ್ಯ ರಾಷ್ಟ್ರದ ನಿರ್ಮಾಣಕ್ಕೆ ಮತದಾರರ ಪಾತ್ರ ಅತ್ಯಗತ್ಯವಾಗಿದೆ. ಸಮರ್ಥ ನಾಯಕನನ್ನು ಆಯ್ಕೆ ಮಾಡಲು ಮತದಾರನಿಂದ ಮಾತ್ರ ಸಾಧ್ಯ. ಆದುದರಿಂದ ಎಲ್ಲರೂ ಮತದಾನ ಮಾಡಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ತಹಶೀಲ್ದಾರರಾದ ಅರ್ಚನಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರರ ದಿನಾಚರಣೆಯ ಮುಖ್ಯ ಉದ್ದೇಶವೇ ಮತದಾರರಲ್ಲಿ ಜಾಗೃತಿಯನ್ನು ಮೂಡಿಸುವುದೇ ಆಗಿದೆ ಎಂದರು. ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಣಿಯನ್ನು ಮಾಡಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕಿವಿಮಾತು ಹೇಳಿದರು.
ಕಲಾವಿದರಾದ ಬಿ.ಆರ್.ಸತೀಶ್ ಹಾಗೂ ಸಾದಿಕ್ ಮತದಾನ ಜಾಗೃತಿಯ ಚಿತ್ರವನ್ನು ಬಿಡಿಸಿದರು.
ಗಾಯಕರಾದ ಟಿ.ಡಿ. ಮೋಹನ್ ಮತದಾನದ ಜಾಗೃತಿ ಗೀತೆಯನ್ನು ಹಾಡಿದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ್ ಕೊಟ್ಟಾರಿ, ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಚಂದ್ರಕುಮಾರ್, ಗ್ರೇಡ್ 2 ತಹಶೀಲ್ದಾರ ಪ್ರದೀಪಕುಮಾರ್, ಸಂತ ಅನ್ನಮ್ಮ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ತಾಲೂಕು ಕಚೇರಿಯ ಸಿಬ್ಬಂದಿಗಳು, ಉಪನ್ಯಾಸಕರು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
ಮತದಾರರ ಜಾಗೃತಿ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅರ್ಚನಾ ಭಟ್ ಮತದಾರರ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಉಪನ್ಯಾಸಕರಾದ ಚಾಲ್ರ್ಸ್ ಡಿಸೋಜಾ ಸ್ವಾಗತಿಸಿ ನಿರೂಪಿಸಿದರು.
Breaking News
- *ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣ : ಸಂಸದ ಯದುವೀರ್ ಭರವಸೆ*
- *ಹಾಕತ್ತೂರು, ಮೇಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಂಸದ ಯದುವೀರ್*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನಾಪೋಕ್ಲು : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*
- *ನಂಜರಾಯಪಟ್ಟಣದ ಪುರಾತನ ವೀರಭದ್ರ ದೇವಾಲಯಕ್ಕೆ ಸಂಸದ ಯದುವೀರ್ ಭೇಟಿ*
- *ಕುಂಜಿಲದಲ್ಲಿ ಮಕ್ಕಳ ದಿನಾಚರಣೆ : ಒಂದೆಡೆ ಸೇರಿದ 9 ಶಾಲೆಯ ವಿದ್ಯಾರ್ಥಿಗಳು*
- ವಿಟಿಯು ರಾಜ್ಯಮಟ್ಟದ ಸ್ಪರ್ಧೆ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*
- *ಕೆ.ನಿಡುಗಣೆ ಮತ್ತು ಗಾಳಿಬೀಡು ಗ್ರಾಮಸ್ಥರ ಅಹವಾಲು ಆಲಿಸಿದ ಸಂಸದ ಯದುವೀರ್*
- *ಕರಿಕೆಯಲ್ಲಿ ನಿರಂತರ ಚಿರತೆ ದಾಳಿ : ಅರಣ್ಯಾಧಿಕಾರಿಗಳಿಗೆ ದೂರು ನೀಡಿದ ಗ್ರಾ.ಪಂ*
- *ಮಕ್ಕಂದೂರಿನಲ್ಲಿ ಸಂಘಟನಾ ಪರ್ವ ಆರಂಭಿಸಿದ ಸಂಸದ ಯದುವೀರ್*