ಮಡಿಕೇರಿ ಜ.25 : ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.28 ರಂದು ಡಾ.ವಿಜಯ್ ಪೂಣಚ್ಚ ತಂಬಂಡ ಅವರ ಅಧ್ಯಕ್ಷತೆಯಲ್ಲಿ ಬೆಟ್ಟಗೇರಿಯಲ್ಲಿ ನಡೆಯಲಿದೆ. ಸಂಭ್ರಮದ ಸಮ್ಮೇಳನಕ್ಕಾಗಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನವೀನ್ ಅಂಬೇಕಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ತುಂಬು ಸಹಕಾರದೊಂದಿಗೆ ಕನ್ನಡದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ಬೆಳಿಗ್ಗೆ 8 ಉದಯ ವಿದ್ಯಾಸಂಸ್ಥೆಯಲ್ಲಿ ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕನ್ನಡ ಸಾಹಿತ್ಯ ಪರಿಷತ್ತು ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ಲು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರಕಲಿದೆ ಎಂದರು.
ವಿವಿಧ ದ್ವಾರಗಳ ಉದ್ಘಾಟನೆ : ಬೆಳಿಗ್ಗೆ 8.30ಕ್ಕೆ ಏಕಕಾಲಕ್ಕೆ ಗಣ್ಯರ ನೆನಪಿನ ದ್ವಾರ ಉದ್ಘಾಟನೆಯಾಗಲಿದೆ. ಹೊಸೂರು ಜೋಯಪ್ಪ ನೆನಪಿನ ದ್ವಾರವನ್ನು ಡಿಸಿಸಿ ಬ್ಯಾಂಕ್ ನಿವೃತ್ತ ಸಹಾಯಕ ವ್ಯವಸ್ಥಾಪಕರು ತೋರೆರ ಎಂ.ಮುದ್ದಯ್ಯ ಅವರು, ಕೆ.ಸಿ.ರಾಮಮೂರ್ತಿ ಮತ್ತು ಚೌರೀರ ಎಂ.ಪೆಮ್ಮಯ್ಯ ನೆನಪಿನ ದ್ವಾರವನ್ನು ಸಾಹಿತಿ ಬೈತಡ್ಕ ಜಾನಕಿ ಬೆಳ್ಳಿಯಪ್ಪ, ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ನೆನಪಿನ ದ್ವಾರವನ್ನು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಕೊಡಪಾಲು ಎಸ್.ಗಣಪತಿ ಉದ್ಘಾಟಿಸಲಿದ್ದಾರೆಂದು ಮಾಹಿತಿ ನೀಡಿದರು.
ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ : ಬೆಟ್ಟಗೇರಿ ನಾಪೋಕ್ಲು ಕೂಡು ರಸ್ತೆಯಿಂದ ವೇದಿಕೆಯವರೆಗೆ ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಅವರ ಭವ್ಯ ಮೆರವಣಿಗೆ ವಿವಿಧ ಸಾಂಸ್ಕøತಿಕ ಕಲಾ ತಂಡಗಳೊಂದಿಗೆ ಬೆಳಗ್ಗೆ 9.15 ಗಂಟೆಗೆ ಆರಂಭಗೊಳ್ಳಲಿದ್ದು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆಂದರು.
ಮುಖ್ಯ ದ್ವಾರ ಉದ್ಘಾಟನೆ : ಮೆರವಣಿಗೆ ಬಳಿಕ ಫೀ.ಮಾ.ಕೆ.ಎಂ ಕಾರ್ಯಪ್ಪ ಮುಖ್ಯ ದ್ವಾರ, ಪುಸ್ತಕ ಮಳಿಗೆ ಹಾಗೂ ವಿವಿಧ ಒಕ್ಕೂಟಗಳ ಮಳಿಗೆ, ನೀರ್ಕಜೆ ಮಹಾಬಲೇಶ್ವರ ಭಟ್ ಸಭಾಂಗಣ, ಡಾ.ಕೋಡಿ ಕುಶಾಲಪ್ಪ ಗೌಡ ವೇದಿಕೆಯನ್ನು ಗಣ್ಯರು ಉದ್ಘಾಟಿಸಲಿದ್ದಾರೆಂದರು.
ಸಮ್ಮೇಳನ ಉದ್ಘಾಟನೆ : ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಸಮ್ಮೇಳನದ ಸಭಾಕಾರ್ಯಕ್ರಮವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಸ್ಮರಣ ಸಂಚಿಕೆ ಬಿಡುಗಡೆಮಾಡಲಿದ್ದಾರೆ. ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಸಾಹಿತಿ ಕಿಗ್ಗಾಲು ಗಿರೀಶ್ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಹತ್ತನೇ ತರಗತಿ ಮತ್ತು ಪದವಿ ಪೂರ್ವ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶೇ.100 ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆಯೆಂದು ತಿಳಿಸಿದರು.
ಸಾಹಿತ್ಯ ಗೋಷ್ಠಿ -ಮಧ್ಯಾಹ್ನ 2 ಗಂಟೆಗೆಯಿಂದ 3 ಗಂಟೆವರೆಗೆ ಮೂರು ಸಾಹಿತ್ಯ ಗೋಷ್ಠಿಗಳು ‘ ಯುವ ಪೀಳಿಗೆ ಮತ್ತು ಸಾಹಿತ್ಯ’, ‘ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆ’ ಮತ್ತು ‘ಸಾಹಿತ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ’ ವಿಷಯದ ಮೇಲೆ ನಡೆಯಲಿದೆಯೆಂದು ವಿವರಗಳನ್ನಿತ್ತರು.
ಕವಿಗೋಷ್ಠಿ –ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯವರೆಗೆ ಸೋಮವಾರಪೇಟೆ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕಿ ಶಿವದೇವಿ ಅವನೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಬಳಿಕ ಸಂಜೆ 4 ಗಂಟೆಯಿಂದ ಬಹಿರಂಗ ಅಧಿವೇಶನ ನಡೆಯಲಿದ್ದು, ಮಡಿಕೇರಿ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಕಾರ್ಯದರ್ಶಿ ಕೆ.ಯು.ರಂಜಿತ್ ನಿರ್ಣಯ ಮಂಡನೆ ಮಾಡಲಿದ್ದಾರೆ.
ಇದೇ ಸಂದರ್ಭ ಸಾಹಿತಿ ಬಾರಿಯಂಡ ಆರ್.ಜೋಯಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 14 ಮಂದಿಯನ್ನು ಸನ್ಮಾನಿಸಿ ಗೌರವಿಸಲಾಗುತ್ತದೆಂದು ವಿವರಗಳನ್ನಿತ್ತರು.
ಸಮಾರೋಪ-ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಆಶಯ ನುಡಿಗಳನ್ನಾಡಲಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೆ.ಆರ್.ಗಂಗಾದರ ಗೌಡ ಸಮಾರೋಪ ಭಾಷಣ ಮಾಡಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆಯೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ಮಡಿಕೇರಿ ತಾಲ್ಲೂಕು ಗೌರವ ಕಾರ್ಯದರ್ಶಿಗಳಾದ ಕೆ.ಯು.ರಂಜಿತ್, ಕಡ್ಲೇರ ತುಳಸಿ ಮೋಹನ್, ಸಂಘಟನಾ ಕಾರ್ಯದರ್ಶಿ ಪುದಿಯನೆರವನ ರಿತೀಶ್ ಮಾದಯ್ಯ, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
Breaking News
- *ಕುಶಾಲನಗರ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ*
- *ನ.17 ರಂದು ಎಲ್ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯಲ್ಲಿ ಚಿತ್ರಕಲಾ ಸ್ಪರ್ಧೆ*
- *ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಕೊಡಗು ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು ಆಯ್ಕೆ*
- *ಅರೆಕಾಡಿನಲ್ಲಿ ಗಮನ ಸೆಳೆದ ‘ನಾಡೊರ್ಮೆ’ ಕಾರ್ಯಕ್ರಮ : ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಮತ್ತಷ್ಟು ಶ್ರಮಿಸಿ : ಶಾಸಕ ಡಾ.ಮಂತರ್ ಗೌಡ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ : ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ : ಎಸ್ಪಿ ಕೆ.ರಾಮರಾಜನ್*
- *”ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣ : ಸಂಸದ ಯದುವೀರ್ ಭರವಸೆ*
- *ಹಾಕತ್ತೂರು, ಮೇಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಂಸದ ಯದುವೀರ್*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನಾಪೋಕ್ಲು : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*