ವಿರಾಜಪೇಟೆ ಜ.25 : ವಿರಾಜಪೇಟೆ ತಾಲೂಕಿನ ಸುಮಾರು 62 ಪ್ರೌಢಶಾಲೆಗಳಲ್ಲಿ ಶಿಕ್ಷಣ ಇಲಾಖೆ ಹಾಗೂ ಇ.ಎಲ್.ಸಿ ಕ್ಲಬ್ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮತದಾನದ ಪ್ರತಿಜ್ಞಾವಿಧಿಯನ್ನು ಶಾಲೆಯ ಆವರಣದಲ್ಲಿ ಮಾಡಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ, ಬಹುಮಾನವನ್ನು ವಿತರಿಸಲಾಯಿತು.
ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ಮತದಾನಕ್ಕೆ ಅರ್ಹರಿರುವ ಪ್ರತಿಯೊಬ್ಬರೂ ಮತದಾನ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರೇಪಣೆ ನೀಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಬೀಳಗಿ ಅವರು ರಾಷ್ಟ್ರೀಯ ಮತದಾರರ ದಿನದ ಕುರಿತಾಗಿ ಮಾತನಾಡಿ 25ನೇ ಜನವರಿ ಭಾರತ ಚುನಾವಣಾ ಆಯೋಗದ ಸಂಸ್ಥಾಪನ ದಿನವನ್ನು 2011 ರಿಂದ ರಾಷ್ಟ್ರೀಯ ಮತದಾರರ ದಿನವನ್ನಾಗಿ ಕೂಡ ಆಚರಿಸಲಾಗುತ್ತಿದೆ ಭಾರತ ದೇಶವು ವಿಶ್ವದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಶಕ್ತಿಶಾಲಿ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾರರ ಹಾಗೂ ಪರಿಪೂರ್ಣ ಪಾಲ್ಗೊಳ್ಳುವಿಕೆಯು ಅತ್ಯಂತ ನಿರ್ಣಾಯಕ ಸಂಗತಿಯಾಗಿದೆ ಎಂದು ಮತದಾನದ ಬಗ್ಗೆ ಮಾತನಾಡಿದರು.
ಪ್ರತಿಜ್ಞಾವಿಧಿಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು ಇಸಿಓ, ಬಿಆರ್‍ಪಿ ವಿರಾಜಪೇಟೆ ಶಾಲೆಯ ಮುಖ್ಯೋಪಾಧ್ಯಾಯರು ಪಾಲ್ಗೊಂಡಿದ್ದರು.
ರಾಷ್ಟ್ರೀಯ ಮತದಾನ ದಿನದ ಅಂಗವಾಗಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ವಿರಾಜಪೇಟೆಯಲ್ಲಿ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ಆಚರಿಸಲಾಯಿತು.
ಈ ಸಂದರ್ಭ ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಿ, ವಿರಾಜಪೇಟೆ ತಾಲೂಕು ದೈಹಿಕ ಪರಿವೀಕ್ಷಕರಾದ ಗಾಯತಿ,್ರ ವಿರಾಜಪೇಟೆ ತಾಲೂಕು ಬಿಆರ್‍ಪಿಗಳಾದ ಗೀತಾಂಜಲಿ, ಪುಷ್ಪ, ಇಸಿಓ ವಿಶಾಲಾಕ್ಷಿ ಭಾಗವಹಿಸಿದ್ದರು.







