ಮಡಿಕೇರಿ ಜ.25 : ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 31ನೇ ವಾರ್ಷಿಕೋತ್ಸವವು ತಾಳತ್ತಮನೆಯಲ್ಲಿ ಸಂಭ್ರಮದಿಂದ ಆಚರಿಯಲಾಯಿತು.
ನೇತಾಜಿ ಯುವಕ ಹಾಗೂ ಯುವತಿ ಮಂಡಲಿ, ಮಡಿಕೇರಿ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಕಾಟಕೇರಿಯ “ಭಗವತಿ ಕಾಫಿ ಲಿಂಕ್ಸ್ ನ ಮಾಲಿಕ ಬಿ.ಎಸ್.ಅಶ್ವಥ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ನಂತರ ಗಣ್ಯರು ನೇತಾಜಿ ಸುಭಾಷ್ ಚಂದ್ರ ಬೋಸ್‍ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಸದಸ್ಯ ಹಾಗೂ ನೇತಾಜಿ ಯುವಕ ಸಂಘದ ಅಧ್ಯಕ್ಷ ಪರ್ಲಕೋಟಿ ಜೀವನ್ ಸಂಘದ ಧ್ವಜಾರೋಹಣವನ್ನು ನೇರವೇರಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯೆ ಬಿ.ಎಸ್.ನವೀನ, ಯುವತಿ ಮಂಡಳಿ ಅಧ್ಯಕ್ಷರಾದ ಬಿ.ಹೆಚ್.ವಿಶಾಲಕ್ಷಿ ಹಾಜರಿದ್ದರು.
ನಂತರ ಸಾರ್ವಜನಿಕ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಗುಡ್ಡಗಾಡು ಓಟದ ಸ್ಪರ್ಧೆ, ಸಾರ್ವಜನಿಕ ಪುರಷರ ಗ್ರಾಮೀಣ ಗುಡ್ಡಗಾಡು ಓಟವನ್ನು ಸ್ಪರ್ಧೆ ನಡೆಯಿತು.
ಗ್ರಾಮೀಣ ಗುಡ್ಡ ಗಾಡು ಓಟದಲ್ಲಿ ಮಾಸ್ಟರ್ ಅಫ್ ಅಥ್ಲೆಟ್ ಸೂದನ ಡಾಲಿ ಭಾಗವಹಿಸಿದ್ದರು.
ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗಳನ್ನು ನಡೆಸಲಾಯಿತು. ವಾಲಿಬಾಲ್ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಿದ್ದು, ಫೈನಲ್ ಪಂದ್ಯಾವಳಿಯನ್ನು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಫೈನಲ್ ಪಂದ್ಯದಲ್ಲಿ Zಙಅ-ಂ, ಕೊಟ್ಟಮುಡಿ ತಂಡವು ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಸಂಜೆ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಮಾತನಾಡಿ ದಿನದ ಮಹತ್ವದ ಬಗ್ಗೆ ತಿಳಿಸಿದರು.
ಈ ಸಂದರ್ಭ ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ, ಮದೆ ಗ್ರಾ.ಪಂ ಅಧ್ಯಕ್ಷ ನಡುಗಲ್ಲು ರಾಮಯ್ಯ, ಗ್ರೀನ್ ಲೈನ್ ಕಾಟೇಜಸ್ ನ ರೋಷನ್ ತಮ್ಮಯ್ಯ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ಹಾಕಿ ಆಟಗಾರ್ತಿ ಚರಿಯಮನೆ ಆರ್.ಕುಮುದ, ನೇತಾಜಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಬಿ.ಡಿ.ಲೋಕೇಶ್ ರೈ, ನೇತಾಜಿ ಯುವತಿ ಮಂಡಳಿ ಮಾಜಿ ಅಧ್ಯಕ್ಷರಾದ ಬಿ.ಈ.ಸರೋಜ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಂತರ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಂಜೆ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆಯಿತು.