ಮಡಿಕೇರಿ ಜ.26 : ಜಿಲ್ಲಾಡಳಿತ ವತಿಯಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಿ, ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಆಕಾಶ್ ಎಸ್. ಇತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಸಚಿವರಾದ ಬಿ.ಸಿ.ನಾಗೇಶ್ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರನ್ನು ಗೌರವಪೂರ್ವಕವಾಗಿ ಗಣರಾಜ್ಯೋತ್ಸವ ಸನ್ಮಾನಿಸಿದರು.
ಈ ಸಂದರ್ಭ ಜಿಲ್ಲಾ ಪೊಲೀಸ್ ಇಲಾಖೆ, ಎನ್‍ಸಿಸಿ, ಗೃಹ ರಕ್ಷಕ ದಳದಿಂದ ನಡೆದ ಪಥಸಂಚಲನ ಗಮನ ಸೆಳೆಯಿತು.