ಮಡಿಕೇರಿ ಜ.26 : ಕೊಡವ ಸಾಂಪ್ರದಾಯಿಕ ‘ಉಮ್ಮತ್ತಾಟ್’ ಕಲಾ ಪ್ರದರ್ಶನವನ್ನು ದೇಶ, ವಿದೇಶಗಳಲ್ಲಿ ಪಸರಿಸುವಲ್ಲಿ ಶ್ರಮಿಸಿ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ರಾಣಿ ಮಾಚಯ್ಯ ಅವರನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಶಾಲು, ಫಲ ತಾಂಬೂಲ ನೀಡಿ ಗೌರವಿಸಿದರು.
ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಫ್ರ್ರಾಂಚೈಸಿಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೇಶವ ಕಾಮತ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಇತರರು ಇದ್ದರು.