ಮಡಿಕೇರಿ ಜ.26 : ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 96 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಶಾಲಾ ಶಿಕ್ಷಣ, ಸಾಕ್ಷರತಾ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಆಕಾಶ್ ಎಸ್. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಇತರರು ಇದ್ದರು.







