ಮಡಿಕೇರಿ ಜ.26 ಗ್ರೇಟರ್ ರಾಜಾಸೀಟು ಉದ್ಯಾನವನವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ವೀಕ್ಷಿಸಿದರು.
ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಗ್ರೇಟರ್ ರಾಜಾಸೀಟು ಅಭಿವೃದ್ಧಿ ಪಡಿಸಲಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ರಾಜಾಸೀಟು ವೀಕ್ಷಣೆಗೆ ಆಗಮಿಸುತ್ತಾರೆ. ಆ ನಿಟ್ಟಿನಲ್ಲಿ ಗ್ರೇಟರ್ ರಾಜಾಸೀಟು ಮತ್ತಷ್ಟು ಅಭಿವೃದ್ಧಿ ಪಡಿಸಲಾಗಿದೆ. ರಾಜಸೀಟು ಉದ್ಯಾನವನ ಮುಂದಿನ ದಿನಗಳಲ್ಲಿ ಇನ್ನಷ್ಟು ಆಕರ್ಷಣೀಯ ಸ್ಥಳ ಆಗಲಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಆಕಾಶ್ ಎಸ್. ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಇತರರು ಇದ್ದರು.







