ಮಡಿಕೇರಿ ಜ.26 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 74 ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಕಾರ್ಯಪ್ಪ ಕೆ.ಬಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ದ್ವಜಾರೋಹಣ ನೆರೆವೇರಿಸಿ ಮಾತನಾಡಿ ದೇಶಕ್ಕಾಗಿ ಮಡಿದ ವೀರರನ್ನು ಸ್ಮರಿಸಿ ವೈದ್ಯಕೀಯ ವೃತ್ತಿಯಲ್ಲಿರುವ ನಾವೆಲ್ಲರೂ ಸಮಾಜಕ್ಕೆ ಸೇವೆಯನ್ನು ನೀಡುವಂತಾಗಬೇಕು ಎಂದರು.
ಶೈಕ್ಷಣಿಕವಾಗಿ ವರ್ಷದಿಂದ ವರ್ಷಕ್ಕೆ ಹೊಸ ಹೊಸ ಕೊರ್ಸ್‍ಗಳನ್ನು ಸಂಸ್ಥೆಯಲ್ಲಿ ಪ್ರಾರಂಬಿಸಲಾಗುತ್ತಿದ್ದು, ಅದರಂತೆ ಈ ಬಾರಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ ಪ್ರಾರಂಭಿಸಲಾಗಿದೆ. ಅಲ್ಲದೆ ಸರ್ಕಾರದಿಂದ 36.97 ಕೋಟಿ ವೆಚ್ಚದಲ್ಲಿ ಕ್ರೀಟಿಕಲ್ ಕೇರ್ ಘಟಕ ಆಸ್ಪತ್ರೆ ನಿರ್ಮಾಣ ಮಾಡಲು ಆಡಳಿತಾತ್ಮಾಕ ಅನುಮೋದನೆ ದೊರೆತಿರುವ ಬಗ್ಗೆ ತಿಳಿಸಿದರು.
ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಸ್ವಾಮಿ ಎಸ್.ಎಲ್ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಬಿ.ಎಸ್ಸಿ ನಸಿರ್ಂಗ್, ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Breaking News
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿರುವ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*
- *ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ವಲಯ ಇಸ್ಲಾಮಿಕ್ ಕಲೋತ್ಸವ : ವಿರಾಜಪೇಟೆ ಯೂನಿಟ್ ಚಾಂಪಿಯನ್*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*