ವಿರಾಜಪೇಟೆ ಜ.26 : ಭಾರತದ ಗಣರಾಜ್ಯವು ಐಕ್ಯತೆಯ ಪ್ರತೀಕವಾಗಿದೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ಮೈದಾನದಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಭಾರತದ ಸಂವಿಧಾನವು ಸ್ವತಂತ್ರ, ಸಮಾನತೆ ಮತ್ತು ಬ್ರಾತೃತ್ವಗಳ ಪ್ರತಿಕವಾಗಿದ್ದು, ರಾಷ್ಟ್ರೀಯ ಭಾವೈಕ್ಯತೆಯ ಮಂತ್ರವನ್ನು ಪಸರಿಸಿದೆ. ಈ ಅಖಂಡ ಭಾರತದಲ್ಲಿ ಐಕ್ಯತೆಯಿಂದ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದರು.
ಸಂತ ಅನ್ನಮ್ಮ ದೇವಾಲಯದ ಗುರುಗಳಾದ ರೆ. ಫಾ. ದಯಾನಂದ ಪ್ರಭು, ಪ್ರಾಂಶುಪಾಲರುಗಳು, ಮುಖ್ಯೋಪಾಧ್ಯಯರುಗಳು, ಭೋದಕ ಭೋದಕೇತಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭ ವಿದ್ಯಾಸಂಸ್ಥೆಗಳ ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.