ನಾಪೋಕ್ಲು ಜ.26: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬೆಂಗಳೂರಿನ ಮುಖ್ಯ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಾಂಜಂಡ ವಿ.ಜಿ.ಬೋಪಯ್ಯ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಜೀವನದಲ್ಲಿ ಏಕಾಗ್ರತೆ ಮುಖ್ಯ. ಯಾವುದೇ ಜಾತಿ ಬೇದ ಭಾವ ವಿಲ್ಲದೆ ಸಮಾಜದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಇದ್ದು, ಇತರರಿಗೆ ಸಹಾಯ ಮಾಡುವುದು ನಮ್ಮ ಆದ್ಯ ಕರ್ತವ್ಯ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದು ಅನೇಕ ಜನರು ಒಳ್ಳೆಯ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇದೇ ರೀತಿ ಮುಂದೆಯೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿವಹಿಸಿ ಉನ್ನತ ಹುದ್ದೆ ಪಡೆದುಕೊಳ್ಳುವಂತಾಗಬೇಕು. ಇದಕ್ಕೆ ಪೋಷಕರು ಮಕ್ಕಳಿಗೆ ಸಹಕಾರ ನೀಡಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ.ಹಾರಿಸ್, ಶಾಲೆಯ ಶೈಕ್ಷಣಿಕ ಗುಣಮಟ್ಟ ಖಾತರಿ ಸಮಿತಿ ಅಧ್ಯಕ್ಷ ಎನ್.ಎಸ್ ಉದಯ ಶಂಕರ್ ದಿನದ ಮಹತ್ವದ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ಡಾ. ಅವನಿಜ ಸೋಮಯ್ಯ, ಉಪ ಪ್ರಾಂಶುಪಾಲ ಶಿವಣ್ಣ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲೆಯ ಕಟ್ಟಡ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ, ಶಾಲಾ ಆಡಳಿ ಮಂಡಳಿ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು,ಪೋಷಕರು ಹಾಜರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕ ಮಾದೇಶ್ ನಿರೂಪಿಡಿದರು. ಉಪಪ್ರಾಂಶುಪಾಲ ಶಿವಣ್ಣ ಸ್ವಾಗತಿಸಿ, ಪ್ರಾಂಶುಪಾಲೆ ಅವನಿಜಾ ಸೋಮಯ್ಯ ವಂದಿಸಿದರು.
ವರದಿ :ಝಕರಿಯ ನಾಪೋಕ್ಲು