ಮಡಿಕೇರಿ ಜ.26 : ನಾಗರಹೊಳೆ ಭಾಗದಲ್ಲಿ ಹುಲಿಗಳ ಗಣತಿ ಕಾರ್ಯಕ್ಕೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.27 ರಿಂದ ಫೆ.6ರವರೆಗೆ ಗಣತಿ ಕಾರ್ಯ ನಡೆಸಲಿದ್ದಾರೆ.
ಉದ್ಯಾನದ 8 ವಲಯಗಳ 91 ಬೀಟ್‌ನಲ್ಲಿ ಗಣತಿ ಕಾರ್ಯ ನಡೆಯಲಿದೆ. ಈ ಬಾರಿ ಸ್ವಯಂಸೇವಕರ ಸಹಾಯವಿಲ್ಲದೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗವೇ ಗಣತಿ ನಡೆಸಲು ಇಲಾಖೆ ನಿರ್ಧರಿಸಿದೆ.
ನಾಗರಹೊಳೆ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರ ನೇತೃತ್ವದಲ್ಲಿ ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬೆಂಗಳೂರಿನ ಟೈಗರ್ ಸೆಲ್‌ನ ವಿನಯ್ ಹಾಗೂ ಡಿಆರ್‌ಎಫ್‌ಓ ನಂದನ್ ಗಣತಿ ಕುರಿತು ತರಬೇತಿ ನೀಡಿದರು.