ಮಡಿಕೇರಿ ಜ.27 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಫೆ.2 ರಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಪತ್ರಿಕಾಭವನದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







