ಮಡಿಕೇರಿ ಜ.27 : ಪಾರಾಣೆ ಸರಕಾರಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪಾರಾಣೆ ಗ್ರಾ.ಪಂ ಅಧ್ಯಕ್ಷ ನೆರೆಯಂಡಮ್ಮನ ಬೆಳ್ಯಮಯ್ಯ ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ನಂತರ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಬಿಲ್ಲವರ ಎಂ.ಕೇಶವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದಿನದ ಮಹತ್ವದ ಕುರಿತು ಮಾಹಿತಿ ನೀಡಲಾಯಿತು.
ಎಸ್ಡಿಎಂಸಿ ಉಪಾಧ್ಯಕ್ಷರಾದ ಶಾಂತಿ, ಸದಸ್ಯರಾದ ಜತ್ತಪ್ಪ, ಬಿ.ಮೋಹನ್, ಸುರೇಶ್ ಹಾಗೂ ಇತರ ಸದಸ್ಯರು, ಶಿಕ್ಷಕರು ಹಾಜರಿದ್ದರು. ಶಾಲಾ ಮುಖ್ಯಶಿಕ್ಷಕಿ ಹೆಚ್.ಎನ್.ಶಾಂತಿ ಸ್ವಾಗತಿಸಿದರು. ಕಿಶೋರ್ ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಹಳೆಯ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ವಿತರಿಸಲಾಯಿತು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.
















