ಮಡಿಕೇರಿ ಜ.27 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ, ಗೋದಾಮು ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.29 ರಂದು ಚೇರಂಬಾಣೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಾಚರಣಿಯಂಡ ಪಿ.ಸುಮನ್ ಹಾಗೂ ಆಡಳಿತ ಮಂಡಳಿಯ ಪ್ರಮುಖರು ತಿಳಿಸಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಲಿದ್ದು, ನೂತನ ಕಟ್ಟಡ ಕಚೇರಿಯನ್ನು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ನೂತನ ಸಭಾಭವನ ಮತ್ತು ನೂತನ ಕಟ್ಟಡದ ಸೇಫ್ ಲಾಕರನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ.ಬಾಂಡ್ ಗಣಪತಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚರಣಿಯಂಡ ಪಿ.ಸುಮನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಉಪಾಧ್ಯಕ್ಷ ಕೇಟೋಳೀರ ಹರೀಶ್ ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚಟ್ಟೋಳಂಡ ಮನು ಮುತ್ತಪ್ಪ, ನಿರ್ದೇಶಕರಾದ ಹೊಸೂರು ಜೆ.ಸತೀಶ್ ಕುಮಾರ್, ಕಿಮ್ಮುಡಿರ ಎ.ಜಗದೀಶ್, ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪೊಡನೋಳನ ಟಿ.ಶ್ರೀನಿವಾಸ, ಬೇಂಗೂರು ಗ್ರಾ.ಪಂ ಅಧ್ಯಕ್ಷರಾದ ಪಿ.ಎಂ.ಯಶೋಧ, ಕೊಡಗು ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್, ಸಹಾಯಕ ನಿಬಂಧಕ ಎಂ.ಈ.ಮೋಹನ್, ಕೊಡಗು ಜಿಲ್ಲಾ ನಬಾರ್ಡ್ ಅಭಿವೃದ್ಧಿ ಅಧಿಕಾರಿ ರಮೇಶ್ ಉಪಸ್ಥಿತರಿರುವರು.
ಕೇಂದ್ರ ಸರ್ಕಾರದ ಬಹುಸೇವಾ ಕೇಂದ್ರ (ಎಂ.ಎಸ್.ಸಿ) ಯೋಜನೆಯಡಿ ಸಂಘದ ನೂತನ ಕಟ್ಟಡ, ಗೋದಾಮು ಹಾಗೂ ಸಭಾಭವನ ರೂ.82.11 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದೆ. ಪ್ರಧಾನಮಂತ್ರಿಗಳ ಆತ್ಮ ನಿರ್ಭರ ಯೋಜನೆಯಡಿ ನಬಾರ್ಡ್‍ನಿಂದ ರೂ.65 ಲಕ್ಷ, ಸಂಘದ ಕ್ಷೇಮನಿಧಿಯಿಂದ ರೂ.10 ಲಕ್ಷ ಹಾಗೂ ಸಂಘದ ಕಟ್ಟಡ ನಿಧಿಯಿಂದ ರೂ.7.11 ಲಕ್ಷ ಬಳಸಿಕೊಳ್ಳಲಾಗಿದೆ.
ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರ ಅನುದಾನ ರೂ.3 ಲಕ್ಷದಲ್ಲಿ ಸಭಾಭವನದ ಟೈಲ್ಸ್ ಕಾಮಗಾರಿ ಮಾಡಲಾಗಿದೆ. ಸಂಘದ ರೂ.6.20 ಲಕ್ಷ ವೆಚ್ಚದಲ್ಲಿ ಭದ್ರತಾ ಕೊಠಡಿ ಮತ್ತು ಸದಸ್ಯರಿಗೆ ಸೇಫ್ ಲಾಕರ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸದಸ್ಯರ ಡಿವಿಡೆಂಟ್ ಹಣ ರೂ.6.31 ಲಕ್ಷ ವೆಚ್ಚದಲ್ಲಿ ಕಚೇರಿ ಪೀಠೋಪಕರಣ ಮತ್ತು ಒಳಾಂಗಣ ಕೆಲಸಕ್ಕೆ ಬಳಸಿಕೊಳ್ಳಲಾಗಿದೆ ಎಂದು ಬಿ.ಪಿ.ಸುಮನ್ ಮಾಹಿತಿ ನೀಡಿದ್ದಾರೆ.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*