ಮಡಿಕೇರಿ ಜ.27 : ಕೊಡಗು ಜಿಲ್ಲಾ ಯುವ ಜಾತ್ಯತೀತ ಜನತಾದಳದ ವತಿಯಿಂದ ಫೆ.2 ರಂದು ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಯುವ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಾಶಿರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಸಾಕಷ್ಟು ಸರ್ಕಾರಿ ಜಾಗವಿದ್ದರೂ ವಸತಿ ರಹಿತರಿಗೆ ನಿವೇಶನ ನೀಡುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯಿಂದಾಗಿ ಜನರು ಹೊರ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುವಂತ್ತಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಪ್ರತಿನಿಧಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಆಡಳಿತ ಪಕ್ಷದ ವೈಫಲ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಯುವ ಜೆಡಿಎಸ್ ತಯಾರಾಗಿದ್ದು, ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. “ಪಂಚರತ್ನ” ಹೆಸರಿನ ಐದು ಯೋಜನೆಗಳನ್ನು ಜನರಿಗೆ ತಲುಪಿಸಲು ಯುವ ಜೆಡಿಎಸ್ ಕಾರ್ಯಪ್ರವೃತ್ತವಾಗಿದೆ ಎಂದರು.
ಯುವ ಜಿಲ್ಲಾ ವಕ್ತಾರ ರವಿಕಿರಣ್ ರೈ ಮಾತನಾಡಿ, ವಿಧಾನಸಭಾ ಚುನಾವಣೆಯ ಹಿನ್ನೆಲೆ ಪಕ್ಷ ಸಂಘಟನೆಯ ಉದ್ದೇಶದಿಂದ ಸಭೆ ಕರೆಯಲಾಗಿದ್ದು, ಯುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.
ಎರಡು ರಾಷ್ಟ್ರೀಯ ಪಕ್ಷಗಳು ಅಭಿವೃದ್ಧಿಗೆ ಆದ್ಯತೆ ನೀಡದೆ ಸಮಾಜದಲ್ಲಿ ಒಡಕು ಮೂಡಿಸಿ ಸಾಮರಸ್ಯ ಕದಡುವ ದ್ವೇಷದ ರಾಜಕಾರಣ ಮಾಡುತ್ತಿವೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಕಾಣುತ್ತಿಲ್ಲ, ಚುನಾವಣೆ ಸಂದರ್ಭ ಮಾತ್ರ ಸೌಹಾರ್ದತೆಯ ಸಂದೇಶ ಸಾರುತ್ತಿದ್ದಾರೆ ಎಂದು ಟೀಕಿಸಿದರು. ಎಲ್ಲರನ್ನೂ ಒಗ್ಗೂಡಿಸುವ ಜಾತ್ಯತೀತ ಪಕ್ಷ ಜೆಡಿಎಸ್ ನ್ನು ಗೆಲ್ಲಿಸುವ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಜೀನಾಸುದ್ದೀನ್, ಮಡಿಕೇರಿ ತಾಲೂಕು ಅಧ್ಯಕ್ಷ ಉಮೇಶ್, ನಗರಾಧ್ಯಕ್ಷ ಮೋನಿಶ್ ಹಾಗೂ ವಿರಾಜಪೇಟೆ ತಾಲೂಕು ಅಧ್ಯಕ್ಷ ಸೈಫುದ್ದೀನ್ ಉಪಸ್ಥಿತರಿದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*