ಮಡಿಕೇರಿ ಜ.27 : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರನ್ನು ಶಾಸಕ ಕೆ.ಜಿ.ಬೋಪಯ್ಯ ಅವರು ಸನ್ಮಾನಿಸಿ ಗೌರವಿಸಿದರು.
ರಾಣಿ ಮಾಚಯ್ಯ ಅವರ ನಿವಾಸಕ್ಕೆ ಪತ್ನಿ ಕುಂತಿ ಬೋಪಯ್ಯನವರೊಂದಿಗೆ ತೆರಳಿ ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭ ಮಾತನಾಡಿದ ಕೆ.ಜಿ.ಬೋಪಯ್ಯ, ಕೊಡಗಿನ ಪಾರಂಪಾರಿಕ ಉಮ್ಮತ್ತಾಟ್ ನೃತ್ಯವನ್ನು ಭಾರತ ಮಾತ್ರವಲ್ಲ ಪ್ರಪಂಚಕ್ಕೆ ಪರಿಚಯಿಸುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಐಮುಡಿಯಂಡ ರಾಣಿ ಮಾಚಯ್ಯ ಅವರಿಗೆ 2023ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಸಂದಿರುವುದು ಕೊಡಗಿನ ಹೆಮ್ಮೆ ಎಂದರು.