ಮಡಿಕೇರಿ ಜ.27 ಮಡಿಕೇರಿ ನಗರದಲ್ಲಿ ವಸತಿ ಯೋಜನೆಯಡಿ 72 ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ವಿತರಿಸಿದರು.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಯೋಜನೆಯ ಮಂಜೂರಾತಿ ಪತ್ರವನ್ನು ವಿತರಿಸಿದರು.
ಇದಕ್ಕೂ ಮೊದಲು ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕರು, ವಿದ್ಯುತ್ ಸಂಪರ್ಕ, ಖಾತೆ ಬದಲಾವಣೆ, ಮಳೆಹಾನಿ ಪರಿಹಾರ, ಇಂದಿರಾ ಆವಾಸ್ ಯೋಜನೆಯಡಿ ಮನೆ ನಿರ್ಮಾಣ…, ಹೀಗೆ 7 ಅರ್ಜಿಗಳು ಬಂದಿದ್ದು, ವಿದ್ಯುತ್ ಸಂಪರ್ಕ ಮತ್ತು ಖಾತೆ ಬದಲಾವಣೆ ಸಂಬಂಧ 15 ದಿನದಲ್ಲಿ ಬಗೆಹರಿಸಲಾಗುವುದು. ಹಾಗೆಯೇ ಮಳೆಹಾನಿ ಪರಿಹಾರ ಸಂಬಂಧ ಪರಿಶೀಲಿಸಲು ತಹಶೀಲ್ದಾರರಿಗೆ ಸೂಚಿಸಲಾಗುವುದು. ಜೊತೆಗೆ ಇಂದಿರಾ ಅವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲಾಗುವುದು ಎಂದರು.
ಮಡಿಕೇರಿ ನಗರಸಭೆ ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ 40 ಕೋಟಿ ರೂ., 15 ನೇ ಹಣಕಾಸು ಯೋಜನೆಯಡಿ 1.48 ಕೋಟಿ ರೂ., ಹಾಗೆಯೇ ನಗರಸಭೆಯಿಂದ 1.15 ಕೋಟಿ ರೂ., ಹೀಗೆ ವಿವಿಧ ವಿಭಾಗದ ಅನುದಾನ ಬಿಡುಗಡೆಯಾಗಿದ್ದು, ಮಡಿಕೇರಿ ನಗರದ ಅಭಿವೃದ್ಧಿಗೆ ಹೆಚ್ಚಿನ ಹಣ ಬಿಡುಗಡೆ ಆಗಿದೆ ಎಂದು ಶಾಸಕರು ವಿವರಿಸಿದರು.
‘ಮಡಿಕೇರಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ 20 ಕೋಟಿ ರೂ. ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ತಿಳಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ನಗರಸಭೆಗೆ 20 ಕೋಟಿ, ಸೋಮವಾರಪೇಟೆ ಪ.ಪಂ.ಗೆ 35 ಕೋಟಿ ಮತ್ತು ಕುಶಾಲನಗರ ಪುರಸಭೆಗೆ 40 ಕೋಟಿ ರೂ. ಹೆಚ್ಚಿನ ಹಣ ಬಿಡುಗಡೆ ಆಗಿದೆ ಎಂದರು.
‘ಈಗಿರುವ ಕಾವೇರಿ ಕಲಾಕ್ಷೇತ್ರದ ಕಟ್ಟಡವನ್ನು ತೆರೆವುಗೊಳಿಸಿ, ಹೊಸ ಕಟ್ಟಡ ನಿರ್ಮಾಣ ಮಾಡುವ ನಿಟ್ಟಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಒಂದು ಸಾವಿರ ಜನರು ಕುಳಿತುಕೊಳ್ಳುವ ಸುಸಜ್ಜಿತ ನೂತನ ಕಾವೇರಿ ಕಲಾಕ್ಷೇತ್ರ ನಿರ್ಮಾಣಕ್ಕೆ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಪ್ಪಚ್ಚು ರಂಜನ್ ಅವರು ಹೇಳಿದರು.’
ಸರ್ಕಾರದಿಂದ ಸ್ತ್ರೀಶಕ್ತಿ ಸಂಘಗಳಿಗೆ ವಾರ್ಡ್ ಒಂದಕ್ಕೆ 5 ಲಕ್ಷ ರೂ. ಸಹಾಯಧನ ಕಲ್ಪಿಸಲಾಗುತ್ತದೆ. ಹಾಗೆಯೇ ಯುವಕ ಸಂಘಗಳಿಗೂ 5 ಲಕ್ಷ ರೂ. ಸಹಾಯಧನ, ಹಾಗೆಯೇ ಕೇಂದ್ರ ಸರ್ಕಾರದಿಂದಲೂ ಹಲವು ಯೋಜನೆಗಳು ಲಭ್ಯವಿದ್ದು, ಇವುಗಳನ್ನು ಬಳಸಿಕೊಳ್ಳಬೇಕು ಎಂದರು.
ಅಂಚೆ ಕಚೇರಿಯಲ್ಲಿ ಹಲವು ವಿಮಾ ಸೌಲಭ್ಯಗಳಿದ್ದು, ಅದನ್ನು ಬಳಸಿಕೊಳ್ಳುವಂತಾಗಬೇಕು. ಕೌಶಲ್ಯಾಭಿವೃದ್ಧಿ ಯೋಜನೆಯಡಿ ಹಲವು ಸೌಲಭ್ಯ ಪಡೆಯುವಂತಾಗಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡ ಜನರ ಒಳಿತಿಗಾಗಿ ಕೆಲಸ ಮಾಡುತ್ತಿವೆ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬ ಬಡವರೂ ಪಡೆಯುವಂತಾಗಬೇಕು ಎಂದು ಶಾಸಕರು ಹೇಳಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಸದಸ್ಯರಾದ ಕಲಾವತಿ, ಮಂಜುಳ, ಶಾರದ ನಾಗರಾಜ್, ಚಿತ್ರಾವತಿ, ಉಷಾ ಕುಮಾರಿ, ಸಬಿತಾ, ಮಹೇಶ್ ಜೈನಿ, ಸತೀಶ, ಅರುಣ್ ಶೆಟ್ಟಿ, ಕವನ್ ಕಾವೇರಪ್ಪ, ಪೌರಾಯುಕ್ತರಾದ ವಿಜಯ, ಇತರರು ಇದ್ದರು. ನಗರಸಭೆಯ ಸಿಎಒ ಶೈಲಾ ನಿರೂಪಿಸಿದರು. ಹೇಮಾ ಪ್ರಾರ್ಥಿಸಿದರು. ಎಇಇ ಸೌಮ್ಯ ವಂದಿಸಿದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*