ಮಡಿಕೇರಿ ಜ.27 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಸೀಟು ಉದ್ಯಾನವನದಲ್ಲಿ ಫೆ.3 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮನವಿ ಮಾಡಿದ್ದಾರೆ.
ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಫಲಪುಷ್ಪ ಪ್ರದರ್ಶನದಲ್ಲಿ ಹಿಂದಿನ ರಾಜರ ಕಾಲದ ನಾಲ್ಕುನಾಡು ಅರಮನೆ ಕಲಾಕೃತಿ ಒಳಗೊಂಡ ಪುಷ್ಪ ಪ್ರದರ್ಶನ ಆಕರ್ಷಣೀಯವಾಗಿರುತ್ತದೆ ಎಂದರು.
ಫಲಪುಷ್ಪ ಪ್ರದರ್ಶನದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ಯಾಲೇಟ್ ಯುನಿಟ್, ವಿವಿ ಪ್ಯಾಟ್, ಕಂಟ್ರೋಲ್ ಯೂನಿಟ್ ಮಾದರಿಯ ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದರು.
ಕೊಡಗಿನ ಮುಖ್ಯ ಬೆಳೆ ಕಾಫಿಯನ್ನು ಪ್ರತಿಬಿಂಭಿಸಲು ಕಾಫಿ ಕಪ್ ಮತ್ತು ಸಾಸರ್ ಮಾದರಿಯನ್ನು ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ. ಜೊತೆಗೆ ಮಕ್ಕಳಿಗೆ ಮನರಂಜನೆ ನೀಡುವಂತಹ ಪೋಟೋ ಪ್ರೇಮ್ ಸೆಲ್ಪಿ ಜೋನ್ ಮಾದರಿಯನ್ನು ಹೂವಿನಲ್ಲಿ ನಿರ್ಮಾಣ ಮಾಡಲಾಗುತ್ತದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್ ಮತ್ತಿತರ ಸೆಲ್ಪಿ ಜೋನ್ ಮಾದರಿಗಳನ್ನು ಎಲೆಗಳಿಂದ ತಯಾರಿಸುವ ಪುಷ್ಪ ಪ್ರದರ್ಶನ ಇರಲಿದೆ ಎಂದರು.
ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ ಮತ್ತು ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗುವುದು. ವಿವಿಧ ಅಲಂಕಾರಿಕ ಗಿಡಗಳಾದ ಬೊನ್ಸಾಯ್ ಗಿಡಗಳ ಪ್ರದರ್ಶನ ಇಕೆಬಾನೆ ಹೂವಿನ ಜೋಡನೆ, ಆಂಥೋರಿಯo ಪ್ರದರ್ಶನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ನಗರದ ಗಾಂಧಿ ಮೈದಾನದಲ್ಲಿ ಈಗಾಗಲೇ 60 ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಕೈಗಾರಿಕಾ ವಾಣಿಜ್ಯ ಇಲಾಖೆ ಹಾಗೂ ಇತರೆ 20 ಇತರೆ ಇಲಾಖೆಗಳಿಗೆ ಮಳಿಗೆ ಕಾಯ್ದಿರಿಸಲಾಗಿದೆ. ಹಾಗೆಯೇ 40 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆ ತೆರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ರೈತರು ಬೆಳೆದಿರುವ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರ ಬೆಳೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶನಕ್ಕೆ ಬಹುಮಾನ ನೀಡಲಾಗುವುದು. ಆ ನಿಟ್ಟಿನಲ್ಲಿ ಫೆಬ್ರವರಿ, 03 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಪ್ರದರ್ಶಿಕೆಗಳನ್ನು ತಂದು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಿ.ಎಂ.ಪ್ರಮೋದ್ ಅವರು ಮಾಹಿತಿ ನೀಡಿ ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣಹೂ ಜೋಡಣೆ, ಬಿಡಿಹೂಗಳ ಜೋಡಣೆ, ಇಕೆಬಾನೆ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುವುದು. ಆಸಕ್ತರು ಫೆಬ್ರವರಿ, 3 ರಂದು ಬೆಳಗ್ಗೆ 10 ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವoತೆ ಕೋರಿದರು.
ಕರ್ನಾಟಕ ದ್ರಾಕ್ಷಿರಸ ಮಂಡಳಿ, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಗಾಂಧಿ ಮೈದಾನದಲ್ಲಿ ‘ವೈನ್ ಉತ್ಸವ’ವನ್ನು ಆಯೋಜಿಸಲಾಗುತ್ತದೆ. ಇದರ ಪ್ರಯುಕ್ತ ಗಾಂಧಿ ಮೈದಾನದಲ್ಲಿ ಸ್ಥಳೀಯ ಹೋಮ್ ಮೇಡ್ ವೈನ್/ ಜ್ಯೂಸ್ ಹಾಗೂ ವೈನ್ ಬೋರ್ಡ್ ವತಿಯಿಂದ ಬ್ರಾಂಡೆಡ್ ವೈನ್‌ಗಳ ಪ್ರದರ್ಶನ ಹಾಗೂ ಮಾರಾಟ, ಪರೀಕ್ಷೆ ಮತ್ತು ರುಚಿ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಆಯೋಜಿಸಲಾಗಿದೆ. ಈ ಬಾರಿ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಪ್ರತಿ ದಿನ 15 ಸಾವಿರ ಹೆಚ್ಚು ಜನರು ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪ್ರಮೋದ್ ಅವರು ತಿಳಿಸಿದರು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಇತರರು ಇದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*