ಮಡಿಕೇರಿ ಜ.28 : ಸೋಮವಾರಪೇಟೆ ಮಂಡಲ ಯುವ ಮೋರ್ಚಾ ವತಿಯಿಂದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಕುಶಾಲನಗರದ ಪಟ್ಟಣ ವ್ಯಾಪ್ತಿಯಲ್ಲಿ ಯುವ ಮತದಾರರ ಸಂಪರ್ಕ, ಸದಸ್ಯತ್ವ ನೋಂದಣಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ನೀಡಿ, ಸ್ಟಿಕ್ಕರ್ ಅಳವಡಿಸಲಾಯಿತು.
ಈ ಸಂದರ್ಭ ಮಂಡಲ ಯುವ ಮೋರ್ಚ ಅಧ್ಯಕ್ಷ ಚಂದ್ರಶೇಖರ್ ಹೇರೂರು , ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ,ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹಾಗೂ ಜಿಲ್ಲಾ ಪ್ರಭಾರಿಗಳಾದ ಜೈ ಶಂಕರ್ ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪದ್ಮನಾಭ್ , ಮೋಹಿತ್ ತಿಮ್ಮಯ್ಯ , ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನವನೀತ್ ಪೂನೇಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಯುವ ಮೋರ್ಚ ಮಂಡಲ ಕಾರ್ಯದರ್ಶಿ ಮಣಿಕಂಠ ಹಾರಂಗಿ ಇದ್ದರು.