ಮಡಿಕೇರಿ ಜ.28 : ಕುಟ್ಟಂದಿ ಕೆ.ಬಿ.ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಹಾಗೂ ಕ್ರೀಡೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
ವಿದ್ಯಾಸಂಸ್ಥೆಯ ಅಧ್ಯಕ್ಷ ಕಂಜಿತಂಡ ಕೆ.ಮಂದಣ್ಣ ಧ್ವಜಾರೋಹಣ ನೆರವೇರಿಸಿ, ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಿದ ದಾನಿಗಳನ್ನು ಸ್ಮರಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಳ್ಳಿಮಾಡ ಕಾವೇರಪ್ಪ ಶಾಲೆಯ ಮುಖ್ಯ ದ್ವಾರದಲ್ಲಿ ಗೇಟು ಹಾಗೂ ಕಮಾನು ನಿರ್ಮಿಸಿ ಕೊಡುವುದಾಗಿ ಹೇಳಿದರು.
ನಾಮೇರ ನವೀನ್ ಮಾತನಾಡಿ, ಶಾಲೆಯ ಅಭಿವೃದ್ಧಿಗಾಗಿ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆ ನೀಡಿದರು.
ವಿದ್ಯಾಸಂಸ್ಥೆಯ ಖಜಾಂಚಿ ಉಮೇಶ್ ಕೇಚಮಯ್ಯ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ದಾನಿಗಳ ಸಹಕಾರವನ್ನು ಕೋರಿದರು.
ಕ್ರೀಡೋತ್ಸವದ ಪ್ರಯುಕ್ತ ವಿವಿಧ ಕ್ರೀಡಾ ಚುಟವಟಿಕೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾಂಸ್ಥೆಯ ಉಪಾಧ್ಯಕ್ಷ ಕೊಲ್ಲೀರ ಯು.ಬೋಪಣ್ಣ ಕ್ರೀಡೆಯ ಪ್ರಥಮ ಬಹುಮಾನದ ಮೊತ್ತವನ್ನು ಉದಾರವಾಗಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು. ಮುಖ್ಯ ಶಿಕ್ಷಕಿ ಕೆ.ಎ.ದ್ವೀಪ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕರಾದ ಎ.ಎ.ಮುತ್ತಪ್ಪ ಕಾರ್ಯಕ್ರಮ ನಿರೂಪಿಸಿದರು. ಚಂದನ್ ವಂದಿಸಿದರು.















