ಸುಂಟಿಕೊಪ್ಪ,ಜ.28 : ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಪರಿಸರ ನೀರು ಆಹಾರದ ಮಹತ್ವದ ಕುರಿತು ಅರಿವು ಮೂಡಿಸಿದರು.
ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಿಂದ ಹಸಿರು, ಹಳದಿ, ನೀಲಿ ಕೆಂಪು ಸಮವಸ್ತ್ರದಲ್ಲಿ ಹೊರಟ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಅರುಳ್ ಸೇಲ್ವಕುಮಾರ್, ಶಾಲಾ ಮುಖ್ಯೋಪಾದ್ಯಾಯ ಸೇಲ್ವರಾಜ್, ಉಪಯಾಜಕರಾದ ಚಾಲ್ಸ್ ಚಾಲನೆ ನೀಡಿದರು.













