ಮಡಿಕೇರಿ ಜ.28 : ಜಿಲ್ಲೆಯಲ್ಲಿನ ಬುಡಕಟ್ಟು ಭಾಷೆಗಳನ್ನು ಉಳಿಸಿ, ಬೆಳೆಸುವಂತಾಗಲು ಮತ್ತೊಂದು ಅಕಾಡೆಮಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯಲ್ಲಿ ನಡೆದ 11 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮೂಲ ಸಂಸ್ಕೃತಿ ಉಳಿಸುವಲ್ಲಿ ಬುಡಕಟ್ಟು ಸಮುದಾಯಗಳ ಭಾಷೆ ಅಭಿವೃದ್ಧಿಗೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಯರವ, ಕುಡಿಯ, ಕಾಡುಕುರುಬ, ಜೇನುಕುರುಬ, ಬೆಟ್ಟಕುರುಬ, ಸೋಲಿಗ ಹೀಗೆ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ಭಾಷೆ ಮಾತನಾಡುತ್ತಿದ್ದು, ಇವುಗಳು ಕನ್ನಡದ ಉಪ ಭಾಷೆಗಳಾಗಿದ್ದು, ಇವುಗಳನ್ನು ಉಳಿಸಿ ಬೆಳೆಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಗಳು ಸ್ಥಾಪನೆಯಾಗಿದೆ. ಜೊತೆಗೆ ಬುಡಕಟ್ಟು ಸಮಾಜಗಳು ಮಾತನಾಡುವ ಭಾಷೆ ಉಳಿಸಿ, ಬೆಳೆಸುವಲ್ಲಿ ಅಕಾಡೆಮಿ ಸ್ಥಾಪನೆ ಸಮಯೋಚಿತವಾಗಿದೆ ಎಂದು ನುಡಿದರು.
ಆಧುನಿಕತೆ ಬೆಳೆದಂತೆ ನಗರ ಪಟ್ಟಣ ಪ್ರದೇಶಗಳಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಬರದಿದ್ದರೆ ಹೆಮ್ಮೆಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಳ್ಳೆಯ ಬೆಳವಣಿಗೆಯೇ ಎಂದು ಆತ್ಮವಲೋಕನ ಮಾಡಬೇಕಿದೆ. ಇಂತಹುದು ಗ್ರಾಮೀಣ ಪ್ರದೇಶಗಳಿಗೂ ಇತ್ತೀಚೆಗೆ ತಲುಪುತಿದೆ ಎಂದರು.
ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಎಂಬುದನ್ನು ಯಾರೂ ಸಹ ಮರೆಯಬಾರದು. ಭಾರತೀಯ ಸಂಸ್ಕøತಿಯು ಅನೇಕತೆಯಲ್ಲಿ ಏಕತೆಯನ್ನು ಹೊಂದಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ವ್ಯವಹಾರಿಕ ಭಾಷೆಯಾದರೂ ಸಹ, ನಮ್ಮ ಮಾತೃ ಭಾಷೆಗಳನ್ನು ಮರೆಯಬಾರದು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. ಕನ್ನಡ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಸಹಕಾರ ನೀಡುತ್ತಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ವಿವಿಧ ಭಾμÉಗಳಿದ್ದು, ಕೊಡಗಿನ ಬುಡಕಟ್ಟು ಸಂಸ್ಕೃತಿ ಉಳಿಸಲು ಶ್ರಮಿಸಬೇಕಿದೆ ಎಂದರು.
ಯುವಜನರು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಬೇಕು. ಪೂರ್ವಿಕರಿಂದ ಉಳಿಸಿಕೊಂಡು ಬಂದಿರುವ ಭಾಷೆಯನ್ನು ಮುಂದುವರಿಸಬೇಕು. ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಬೇಕು. ಸಾಹಿತ್ಯ ಪ್ರಕಾರದ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದರು.
ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ಮಾತನಾಡಿ ರಾಷ್ಟ್ರದಲ್ಲಿ ಗುರುತಿಸುವಂತಹ ಪುಣ್ಯಭೂಮಿ ಕೊಡಗು. ಕಾವೇರಿ ಮಾತೆಯನ್ನು ನಾವು ಸದಾ ಪೂಜಿಸಬೇಕು. ಕೊಡಗಿನ ಪುಣ್ಯಭೂಮಿಯಲ್ಲಿ ಕಿಟಲ್ ಅವರು ಪದಕೋಶವನ್ನು ಆರಂಭಿಸಿದರು. ಇದು ಹೆಮ್ಮೆಯ ವಿಚಾರವಾಗಿದೆ ಎಂದರು.
ಇಂದಿಗೂ ಸಹ ಗ್ರಾಮೀಣ ಹಾಗೂ ಬುಡಕಟ್ಟು ಜನರು ವಾಸಿಸುವ ಪ್ರದೇಶದಲ್ಲಿ ಕನ್ನಡ ಭಾಷೆ ಉಳಿದಿದೆ ಎಂದರೆ ತಪ್ಪಾಗಲಾರದು. ಕನ್ನಡವು ಸಮಸ್ತ ನಾಡಿನ ಭಾಷೆಯಾಗಿದೆ. ಪಂಪ, ರನ್ನ, ಪೊನ್ನ, ಹೀಗೆ ಹಲವರು ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದು ಡಾ.ಡಿ.ರವಿ ಅವರು ಹೇಳಿದರು.
ರಾಷ್ಟ್ರದಲ್ಲಿ ಭಾಷೆಯ ಮೂಲಕ ರಾಜ್ಯಗಳನ್ನು ವಿಂಗಡಣೆ ಮಾಡಲಾಗಿದೆ. ಆ ನಿಟ್ಟಿನಲ್ಲಿ ಯಾವುದೇ ಜಾತಿ, ಧರ್ಮ, ಪಂಥಕ್ಕಿಂತ ನಾಡಿನ ಭಾಷೆಯೇ ಎಲ್ಲರನ್ನೂ ಒಟ್ಟುಗೂಡಿಸಲು ಸಾಧ್ಯ ಎಂಬುದನ್ನು ಮರೆಯುವಂತಿಲ್ಲ ಎಂದರು.
ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಕನ್ನಡ ಸಾಹಿತ್ಯ ಮತ್ತು ಸಂಸ್ಕøತಿಯನ್ನು ಉಳಿಸಿದಲ್ಲಿ ಮಾತ್ರ ಕನ್ನಡ ಅಸ್ಮಿತೆ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಯಾವುದೇ ಭಾಷೆಯನ್ನು ಮಾತನಾಡಿದರೂ ಸಹ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು. ಕನ್ನಡ ಸಾಹಿತ್ಯ ಅಧ್ಯಯನದಿಂದ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯ ಎಂದು ಹೇಳಿದರು.
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ರಾಣಿ ಮಾಚಯ್ಯ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ 10 ಸಾವಿರ ಮಕ್ಕಳಿಗೆ ಕೊಡವ ಸಾಂಪ್ರದಾಯಿಕ ‘ಉಮ್ಮತ್ತಾಟ್’ ಕಲಿಸಲು ಪ್ರಯತ್ನಿಸಲಾಗಿದೆ. ನನಗೆ ಸಿಕ್ಕಿರುವ ಪದ್ಮಶ್ರೀ ಪ್ರಶಸ್ತಿಯು ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ದೊರೆತಂತೆ ಎಂದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಪ್ರತಿಯೊಬ್ಬರೂ ಕನ್ನಡದಲ್ಲಿ ಮಾತನಾಡಬೇಕು. ಕನ್ನಡದಲ್ಲಿ ಬರೆಯಬೇಕು. ಕನ್ನಡ ಭಾಷೆ ಬಗ್ಗೆ ಪ್ರೀತಿ, ಅಭಿಮಾನ ಇರಬೇಕು. ಕನ್ನಡ ಕೆಲಸಗಳಿಗೆ ಸದಾ ಬೆಂಬಲವಿರುತ್ತದೆ ಎಂದರು.
ಸಾಹಿತಿ ಕಿಗ್ಗಾಲು ಗಿರೀಶ್ ಅವರು ಮಾತನಾಡಿ ಕನ್ನಡ ಭಾಷೆ ಮಾತನಾಡಲು ಹಿಂಜರಿಕೆ ಬೇಡ. ಕನ್ನಡ ಪುಸ್ತಕಗಳನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿದರು. ಬೆಟ್ಟಗೇರಿ ಗ್ರಾ.ಪಂ.ಅಧ್ಯಕ್ಷರಾದ ನಾಪಂಡ ರ್ಯಾಲಿ ಮಾದಯ್ಯ, ಸಾಹಿತಿ ಬಾಚರಣಿಯಂಡ ಕೆ.ಅಪ್ಪಣ್ಣ, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನವೀನ್ ಅಂಬೆಕಲ್ಲು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ತಳೂರು ಕಿಶೋರ್ ಕುಮಾರ್, ಮಡಿಕೇರಿ ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ರೇವತಿ ರಮೇಶ್, ಕಸಾಪ ತಾಲ್ಲೂಕು ಅಧ್ಯಕ್ಷರು ಇತರರು ಇದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*