ಮಡಿಕೇರಿ ಜ.28 : ಪೊನ್ನಂಪೇಟೆಯ ಹೈಸೊಡ್ಲೂರು ಗ್ರಾಮದಲ್ಲಿ ಪ್ಲಾಸ್ಟಿಕ್ ಗುಡಿಸಲು ನಿರ್ಮಿಸಿಕೊಂಡು ವಾಸವಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.
ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಶೀಲ್ದಾರರ ಕಚೇರಿಯವರೆಗೆ ಮೆರವಣಿಗೆ ಮೂಲಕ ಸಾಗಿದ ಸಂಘಟನೆಯ ಪ್ರಮುಖರು ಹಾಗೂ ವಸತಿ ರಹಿತರು ಬೇಡಿಕೆಯ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿದರು.
ಸಂಘಟನೆಯ ಹಿರಿಯ ಮುಖಂಡರಾದ ಹೆಚ್.ಎಸ್.ಕೃಷ್ಣಪ್ಪ ಮಾತನಾಡಿ, ಸ್ವಾತಂತ್ರö್ಯ ಬಂದು 75 ವರ್ಷಗಳೇ ಕಳೆದರು ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಬಡಮಂದಿ ತೋಟದ ಲೈನ್ ಮನೆಗಳಲ್ಲಿ ಸಂಕಷ್ಟದ ಬದುಕು ಸಾಗಿಸುವ ಪರಿಸ್ಥಿತಿ ಮುಂದುವರೆದಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.
ಹೈಸೊಡ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 8 ಏಕರೆ ಸರ್ಕಾರಿ ಜಾಗ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಅಧೀನದಲ್ಲಿದೆ. ಒಂದು ಏಕರೆ ಜಾಗದಲ್ಲಿ ಸುಮಾರು 74 ಪರಿಶಿಷ್ಟ ಪಂಗಡದ ಕುಟುಂಬಗಳು ಕಳೆದ 5 ವರ್ಷಗಳಿಂದ ಪ್ಲಾಸ್ಟಿಕ್ ಗುಡಿಸಲುಗಳನ್ನು ಹಾಕಿಕೊಂಡು ವಾಸವಾಗಿದ್ದಾರೆ. ಇಲ್ಲಿನ ನಿವಾಸಿಗಳು ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ಸಂಬoಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಅಲ್ಲದೆ ಕೆ.ಬಾಡಗ ಗ್ರಾಮದ ಸರ್ಕಾರಿ ಜಾಗದಲ್ಲೂ ಪ್ಲಾಸ್ಟಿಕ್ ಗುಡಿಸಲುಗಳನ್ನು ಹಾಕಿಕೊಂಡು ನೆಲೆಸಿದ್ದ ಪರಿಶಿಷ್ಟ ಪಂಗಡದವರನ್ನು ದಿಢೀರ್ ಎಂದು ಒಕ್ಕಲೆಬ್ಬಿಸಲಾಗಿತ್ತು. ಅಲ್ಲದೆ ನಾಲ್ಕು ಏಕರೆ ಜಾಗವನ್ನು ಒಂದು ತಿಂಗಳೊಳಗೆ ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಮೂಲಕ ಮಂಜೂರು ಮಾಡಿಕೊಡುವುದಾಗಿ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ನಿವೇಶನ ಅಥವಾ ಮನೆಗಳನ್ನಾಗಲಿ ನೀಡಿಲ್ಲ ಎಂದು ಕೃಷ್ಣಪ್ಪ ಆರೋಪಿಸಿದರು.
ತಕ್ಷಣ ರಾಜ್ಯಪಾಲರು ಭೂ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಿ ಎಲ್ಲಾ ಜಾತಿಯ ಜನರಿಗೆ ಮೀಸಲಾಗುವಂತೆ ಭೂ ಮಿತಿ ಕಾಯ್ದೆಯನ್ನು ಜಾರಿಗೆ ತರಬೇಕು, ಸರ್ಕಾರಿ ಜಾಗವನ್ನು ಸರ್ವೆ ಮಾಡಿ ಬಡ ಜನರಿಗೆ ಹಂಚಬೇಕು, ಜಿಲ್ಲೆಯಲ್ಲಿರುವ ದಲಿತ ಕಾಲೋನಿಗಳಿಗೆ ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯವನ್ನು ಒದಗಿಸಬೇಕು, ಹೈಸೊಡ್ಲೂರು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ವಾಸ ದೃಢೀಕರಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಮತದಾರರ ಪಟ್ಟಿ ನೀಡಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಸಂಚಾಲಕ ರಜಿನಿಕಾಂತ್, ಜಿಲ್ಲಾ ಸಂಚಾಲಕಿ ಓಮನ, ಸಂಘಟನಾ ಸಂಚಾಲಕ ಯೋಗೇಶ್ ಕುಮಾರ್, ಶಿವಕುಮಾರ್, ಜಿಲ್ಲಾ ಖಜಾಂಚಿ ಹೆಚ್.ಜಿ.ರಾಜು ದೇವನೂರು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಮೂಲಕ ರಾಜ್ಯಪಾಲರು ಹಾಗೂ ಸರ್ಕಾರಕ್ಕೆ ಸಲ್ಲಿಸಲಾಯಿತು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*