ಮಡಿಕೇರಿ ಜ.28 : ಕೊಡಗು ಜಿಲ್ಲೆಯ ಯರವ, ಕುಡಿಯ ಹಾಗೂ ಬುಡಕಟ್ಟು ಸಮುದಾಯಗಳ ವಿಶಿಷ್ಟ ಭಾಷೆಗಳನ್ನಾಡುವ ಸಮಾಜಗಳನ್ನು ಗುರುತಿಸಬೇಕು. ಅಂತಹ ಬುಡಕಟ್ಟು ಭಾಷೆಗೆ ಆದ್ಯತೆ ನೀಡಬೇಕು ಎಂದು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಹೇಳಿದರು.
ಬೆಟ್ಟಗೇರಿಯಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬುಡಕಟ್ಟು ಭಾಷಿಕರನ್ನು ಉಳಿಸಿ ಬೆಳೆಸಿದಲ್ಲಿ ಜಿಲ್ಲೆಯ ಸಂಸ್ಕೃತಿ ಉಳಿಯಲು ಸಾಧ್ಯ. ಬುಡಕಟ್ಟು ಸಮುದಾಯಗಳ ಭಾಷೆ ಮತ್ತು ಭಾಷೆಯಿಂದ ಅಭಿವ್ಯಕ್ತವಾಗುವ ಸಂಸ್ಕೃತಿಯನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾಡು ಮಕ್ಕಳ ಕೂಗು ಕೊಡಗು ಬುಡಕಟ್ಟು ಸಮಾಜದವರ ಕಥನಗಳು ಎಂಬ ಕೃತಿಯಲ್ಲಿ ಇಲ್ಲಿನ ಸಣ್ಣ ಸಣ್ಣ ಭಾಷೆಗಳ ಸಂರಕ್ಷಣೆ ಬಗ್ಗೆ ಪುಸ್ತಕ ಹೊರತರುವ ಮೂಲಕ ಶ್ರಮಿಸಲಾಗಿದೆ ಭಾಷೆಯು ಸಂವಹನ ಮಾಧ್ಯಮಕ್ಕೆ ಮೀಸಲಾಗಿಲ್ಲ. ಭಾವನಾತ್ಮಕ ಬದುಕಿನ ಜೀವನದ ಮೂಲ ಶಿಲೆಯಾಗಿದೆ ಎಂಬುದನ್ನು ಮರೆಯುವಂತಿಲ್ಲ ಎಂದರು.
‘ಕನ್ನಡ ಶಾಲೆಗಳನ್ನು ಅಭಿವೃದ್ಧಿಗೊಳಿಸುವುದು ಪ್ರತಿಯೊಬ್ಬರ ನಾಗರಿಕರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಾಲೆಗಳ ಉಳಿವಿಗೆ ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವಂತಾಗಬೇಕು ಎಂದು ತಂಬAಡ ಡಾ.ವಿಜಯ ಪೂಣಚ್ಚ ಅವರು ಹೇಳಿದರು.
ಕಾಲೇಜುಗಳಲ್ಲಿ, ವಿಶ್ವವಿದ್ಯಾನಿಲಯಗಳಲ್ಲಿ ಇಂಗ್ಲೀಷ್ ಬೋಧನಾ ಭಾಷೆ ಇದ್ದರೂ ಸಹ ಶೇ.90 ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಬರೆಯುತ್ತಾರೆ. ಸಮಾಜ ವಿಜ್ಞಾನದಲ್ಲಿ ಕನ್ನಡವನ್ನು ಸಮರ್ಥವಾಗಿ ಬೋಧಿಸಿ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ದೊರಕುವ ಉತ್ತಮ ಕೃತಿಗಳನ್ನು ಅಧ್ಯಯನ ಮಾಡಲು ಸಲಹೆ ಮಾಡುವಂತಾಗಬೇಕು ಎಂದರು.
ಶೈಕ್ಷಣಿಕ ಸಂಸ್ಥೆಗಳು ಕನ್ನಡವನ್ನು ಸಮರ್ಥವಾಗಿ ಬೋಧಿಸುವುದು, ಬರೆಯಲು ಪ್ರೋತ್ಸಾಹಿಸುವುದು ಇಂದಿನ ಜರೂರಾಗಿದೆ ಎಂದರು.
ನಾಡಿನ ಚರಿತ್ರೆ, ಭಾಷೆ, ಸಂಸ್ಕೃತಿ ಅರಿವಿನಲ್ಲಿ ನಾಗರಿಕತೆ ಉಳಿದಿದೆ. ಆ ನಿಟ್ಟಿನಲ್ಲಿ ಬದುಕು, ಗ್ರಾಮ, ಊರುಗಳ ಬದುಕು, ಪಟ್ಟಣ, ನಗರಗಳ ಬದುಕು ಕ್ರೀಯಾಶೀಲತೆ ಕಂಡುಕೊಳ್ಳಲು ಕನ್ನಡವು ಬದುಕಿನ ಭಾಗವಾಗಬೇಕಾದರೆ ಕನ್ನಡ ಭಾಷೆಯನ್ನು ಸಮೃದ್ಧಗೊಳಿಸುವ ಪ್ರಯತ್ನ ಎಲ್ಲರಿಂದಲೂ ಆಗಬೇಕು. ನಮ್ಮ ಕರ್ತವ್ಯ ಎಂಬುದನ್ನು ಯಾರೂ ಸಹ ಮರೆಯಬಾರದು ಎಂದರು.
ಮಡಿಕೇರಿಯು ಮುದ್ದುರಾಜನ ಕೇರಿಯಾಗಿದೆ. ಕುಯ್ಯಂಗೇರಿ ನಾಡಿಗೆ ಪ್ರಾಚೀನ ಇತಿಹಾಸವಿದೆ. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಕೃತಿ, ಸಾಹಿತ್ಯದ ಬಗ್ಗೆ ಅಧ್ಯಯನ ಮಾಡಬೇಕು ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿದರು. ಬೆಟ್ಟಗೇರಿ ಗ್ರಾ.ಪಂ.ಅಧ್ಯಕ್ಷರಾದ ನಾಪಂಡ ರ‍್ಯಾಲಿ ಮಾದಯ್ಯ, ಸಾಹಿತಿ ಬಾಚರಣಿಯಂಡ ಕೆ.ಅಪ್ಪಣ್ಣ, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನವೀನ್ ಅಂಬೆಕಲ್ಲು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ತಳೂರು ಕಿಶೋರ್ ಕುಮಾರ್, ಮಡಿಕೇರಿ ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ರೇವತಿ ರಮೇಶ್, ಕಸಾಪ ತಾಲ್ಲೂಕು ಅಧ್ಯಕ್ಷರು ಇತರರು ಇದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*