ಮಡಿಕೇರಿ ಜ.30 : ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಹಾಗೂ ಪದಾಧಿಕಾರಿಗಳು, ನಿರ್ದೇಶಕರು, ಕಾಲೇಜು ಉಪನ್ಯಾಸಕರು ಸನ್ಮಾನಿಸಿ ಗೌರವಿಸಿದರು. ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕಿಯಾಗಿರುವ ರಾಣಿ ಮಾಚಯ್ಯ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಎಲ್ಲರು ಸಂತಸ ವ್ಯಕ್ತಪಡಿಸಿ, ಅನಿಸಿಕೆ ಹಂಚಿಕೊಂಡರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಫೀ.ಮಾ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ನನ್ನ ತಂಡವನ್ನು ಪ್ರತಿನಿಧಿಸಿ ರಾಜ್ಯ ಹನ್ನೆರಡು ಜಿಲ್ಲೆ, ದೇಶದ 13 ರಾಜ್ಯದಲ್ಲಿ ಪ್ರದರ್ಶನ ನೀಡಿದ್ದಾರೆ. ನನಗೆ ಸಂದಿರುವ ಪ್ರಶಸ್ತಿಗೆ ನನ್ನ ಎಲ್ಲಾ ವಿದ್ಯಾರ್ಥಿಗಳು ಕಾರಣ ಎಂದರು.
ಜಾತಿ, ಧರ್ಮ ಭೇದವಿಲ್ಲದೆ ಎಲ್ಲಾ ವರ್ಗದ ಮಂದಿ ನನಗೆ ಸಹಕಾರ ನೀಡಿದ್ದಾರೆ. ಕೊಡವ ವಿದ್ಯಾರ್ಥಿಗಳು ಮಾತ್ರವಲ್ಲದೆ ಇತರೆ ಜನಾಂಗ, ಧರ್ಮದ ವಿದ್ಯಾರ್ಥಿಗಳು ನನ್ನ ತಂಡದಲ್ಲಿದ್ದಾರೆ. ಎಲ್ಲರನ್ನು ನನ್ನ ಮಕ್ಕಳಂತೆ ನೋಡಿಕೊಳ್ಳುತ್ತಿದ್ದೇನೆ. ಪೋಷಕರು, ಕಾಲೇಜಿನ ಪ್ರಾಂಶುಪಾಲರ ಸಹಕಾರ ಕೂಡಾ ಮಹತ್ತರವಾಗಿದೆ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ನಾಟೋಳಂಡ ಡಿ. ಚರ್ಮಣ, ನಿರ್ದೇಶರಾದ ನಂದಿನೆರವಂಡ ಅಪ್ಪಯ್ಯ, ಬಿದ್ದಂಡ ಕಾವೇರಿ ನಂಜಪ್ಪ, ಪುಟ್ಟಿಚಂಡ ಡಾನ್ ದೇವಯ್ಯ, ಕಿಶೋರ್ ರೈ ಕತ್ತಲೆಕಾಡು, ಬಲ್ಯಂಡ ವಿಜು ನಂಜಪ್ಪ, ಬೊಳಕಾರಂಡ ವಿಠಲ್ ತಿಮ್ಮಯ್ಯ, ನಂದಿನೆರವಂಡ ಅಪ್ಪಯ್ಯ, ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಶ್ರೀಧರ್ ಹೆಗಡೆ, ಉಪನ್ಯಾಸಕರಾದ ಎಂ.ಎನ್. ರವಿಶಂಕರ್, ಡಾ. ವಿಜಯಲತಾ, ಬಿ.ಎಚ್. ತಳವಾರ, ಡಾ. ನಯನಾ ಕಶ್ಯಪ್, ಕಚೇರಿ ಸಿಬ್ಬಂದಿ ಹೇಮಲತಾ ಜಿ.ಎಂ. ಈ ಸಂದರ್ಭದಲ್ಲಿ ಹಾಜರಿದ್ದರು.
ನಂದಿನೆರವಂಡ ಚಿಯಣ್ಣ ಸ್ವಾಗತಿಸಿದರು. ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ವಂದಿಸಿದರು.
Breaking News
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*